ದೆಹಲಿಯಲ್ಲಿ 5ನೇ ತರಗತಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ – ಪ್ಯೂನ್ ಅರೆಸ್ಟ್….
ದೆಹಲಿಯ ಎಂಸಿಡಿ ಶಾಲೆಯಲ್ಲಿ 5 ವರ್ಷದ ವಿದ್ಯಾರ್ಥಿನಿ ಮೇಲೆ 54 ವರ್ಷದ ಪ್ಯೂನ್ ಸೇರಿದಂತೆ ಆತನ ಮೂವರು ಸಹಚರರು ಸೇರಿ ಸಾಮೂಹಿಕ ಅತ್ಯಾಚಾರ ಎಸಗಿರುವ ದುರ್ಘಟನೆ ಗುರುವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಜಿಯಾಬಾದ್ನಲ್ಲಿ ವಾಸಿಸುತ್ತಿದ್ದ ಉತ್ತರ ಪ್ರದೇಶದ ಜೌನ್ಪುರ ಮೂಲದ ಅಜಯ್ ಕಳೆದ 10 ವರ್ಷಗಳಿಂದ ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ ಶಾಲೆಯಲ್ಲಿ ಪ್ಯೂನ್ ಆಗಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಘಟನೆ ಮಾರ್ಚ್ 14 ರಂದು ನಡೆದಿದೆ. ಘಟನೆಯ ನಂತರ, ಬಾಲಕಿ ಶಾಲೆಗೆ ಹೋಗುವುದನ್ನು ನಿಲ್ಲಿಸಿದ್ದಾಳೆ ಮತ್ತು ಪರೀಕ್ಷೆಗೂ ಕೂಡ ಗೈರು ಹಾಜರಾಗಿದ್ದಾಳೆ. ತಕ್ಷಣದ ಕ್ರಮ ಕೈಗೊಳ್ಳದಿರುವ ಕಾರಣ ಶಾಲೆಯ ಮುಖ್ಯೋಪಾಧ್ಯಾಯರು ಮತ್ತು ತರಗತಿ ಶಿಕ್ಷಕರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ ಎಂದು ಎಂಸಿಡಿ ಪ್ರಕಟಣೆಯಲ್ಲಿ ತಿಳಿಸಿದೆ.
ವಿದ್ಯಾರ್ಥಿನಿಯ ಶಿಕ್ಷಕಿ ಆಕೆಯ ಸಹೋದರನನ್ನ ಸಂಪರ್ಕಿಸಿ ಅಂತಿಮ ಪರೀಕ್ಷೆಗೆ ಗೈರುಹಾಜರಾಗಿರುವ ಬಗ್ಗೆ ವಿಚಾರಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಘಟನೆಯ ಬಗ್ಗೆ ಆಕೆಯ ಸಹೋದರ ಶಿಕ್ಷಕರಿಗೆ ಮಾಹಿತಿ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ದೂರಿನ ಪ್ರಕಾರ, ಆರೋಪಿಯು ಬಾಲಕಿಯನ್ನು ಶಾಲೆಯಿಂದ ಅಜ್ಞಾತ ಸ್ಥಳಕ್ಕೆ ಕರೆದೊಯ್ದು, ಯಾವುದೋ ಅಪರಿಚಿತ ಮಾದಕವಸ್ತು ನೀಡಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತೆಯನ್ನು ಲಾಲ್ ಬಹದ್ದೂರ್ ಶಾಸ್ತ್ರಿ ಆಸ್ಪತ್ರೆಗೆ ಸೇರಿಸಲಾಗಿದ್ದು, ವೈದ್ಯಕೀಯ ಪರೀಕ್ಷೆ ನಡೆಸಿ ಕೌನ್ಸೆಲಿಂಗ್ ನಡೆಸಲಾಗುತ್ತಿದೆ.
IPC ಸೆಕ್ಷನ್ 363 (ಅಪಹರಣ), 328 (ವಿಷದ ಮೂಲಕ ನೋವುಂಟುಮಾಡುವುದು ಇತ್ಯಾದಿಗಳು, ಅಪರಾಧ ಮಾಡುವ ಉದ್ದೇಶದಿಂದ), 376D (ಗ್ಯಾಂಗ್ರೇಪ್) ಮತ್ತು 506 (ಅಪರಾಧ ಬೆದರಿಕೆ) ಮತ್ತು ಪೋಕ್ಸೊ ಕಾಯ್ದೆಯಡಿ ಗಾಜಿಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Delhi school: Gang rape of a 5th class girl in Delhi – peon arrested…