ಮೃಗದ ಮೇಲೆ ಮೃಗೀಯ ವರ್ತನೆ – ಬೀದಿ ನಾಯಿ ಮೇಲೆ ಅತ್ಯಾಚಾರವೆಸಗಿದ ವ್ಯಕ್ತಿ…
ಆಘಾತಕಾರಿ ಘಟನೆಯೊಂದರಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬೀದಿ ನಾಯಿಯ ಮೇಲೆ ಅಪರಿಚತ ವ್ಯಕ್ತಿಯೋರ್ವ ಅತ್ಯಾಚಾರ ಎಸೆಗಿದ್ದಾನೆ. ದೆಹಲಿ ಹರಿ ನಗರ ಪ್ರದೇಶದಲ್ಲಿ ಈ ಘಟನೆ ವರದಿಯಾಗಿದೆ.
ಘಟನೆಯ ವಿಡಿಯೋ ಮೊಬೈಲ್ ನಲ್ಲಿ ಸೆರೆಯಾಗಿದೆ. ಉದ್ಯಾನವನದಲ್ಲಿ ನಾಯಿಯ ಮೇಲೆ ಅತ್ಯಾಚಾರ ನಡೆಸಿರುವ ವಿಡಿಯೋ ವೈರಲ್ ಆದ ನಂತರ ಹರಿನಗರದ ಸ್ಥಳೀಯರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ದೂರಿನ ನಂತರ, ಪೊಲೀಸರು ಕ್ರಮ ಕೈಗೊಂಡರು ಮತ್ತು ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ (IPC) ಮತ್ತು ಪ್ರಾಣಿಗಳ ಕಾಯಿದೆಯ ಸೆಕ್ಷನ್ 377/11 ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ.
ವಿಡಿಯೋ ಆಧರಿಸಿ ಆರೋಪಿಯ ಪತ್ತೆಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Delhi stray dog : Man rapes stray dog in Delhi’s Hari Nagar area