Delhi Teacher: 5ನೇ ತರಗತಿ ಬಾಲಕಿಯನ್ನ ಕಿಟಕಿಯಿಂದ ಹೊರೆಗೆ ಎಸೆದ ಶಿಕ್ಷಕಿ…
ಐದನೇ ತರಗತಿ ಓದುತ್ತಿದ್ದ ಬಾಲಕಿ ಮೇಲೆ ಶಿಕ್ಷಕಿ ಕತ್ತರಿಯಿಂದ ಹಲ್ಲೆ ನಡೆಸಿ ನಂತರ ಮೊದಲ ಮಹಡಿಯ ಕಿಟಕಿಯಿಂದ ಹೊರಗೆ ಎಸೆದಿರುವ ಘಟನೆ ರಾಷ್ಟ್ರ ರಾಜಧಾನಿ ನವದೆಹಲಿಯ ದೆಹಲಿ ನಗರ ನಿಗಮ್ ಬಾಲಿಕಾ ವಿದ್ಯಾಲಯದಲ್ಲಿ ಶುಕ್ರವಾರ ನಡೆದಿದೆ.
ತಕ್ಷಣ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕಾಗಮಿಸಿ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆರೋಪಿ ಶಿಕ್ಷಕಿ ಗೀತಾ ದೇಸ್ವಾಲ್ ಅವರನ್ನ ವಶಕ್ಕೆ ಪಡೆಯಲಾಗಿದ್ದು, ಕೊಲೆ ಯತ್ನ ಅಪರಾಧದಡಿ ಪ್ರಕರಣ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಹೆರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಲಕಿ ಅಪಾಯದಿಂದ ಪಾರಾಗಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ.
ಬಾಲಕಿ ಮೇಲೆ ಸಿಟ್ಟಿಗೆದ್ದ ಗೀತಾ ಈ ದುಷ್ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ಅಲ್ಲೇ ಇದ್ದ ಮತ್ತೊಬ್ಬ ಶಿಕ್ಷಕಿ ರಿಯಾ ತಡೆಯಲು ಯತ್ನಿಸಿದ್ದಾರೆ. ಮೊದಲ ಮಹಡಿಯಿಂದ ಬಾಲಕಿ ಬಿದ್ದಿರುವುದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಅಲ್ಲಿಗೆ ಬಂದು ಬಾಲಕಿಯನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ. ಶಿಕ್ಷಕಿ ನಡೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ.
Delhi Teacher: The teacher who threw the 5th class girl from the window…








