ಡ್ರಗ್ಸ್ ವಿಚಾರಕ್ಕೆ ಜಗಳ – ಲೀವ್ ಇನ್ ಸಂಗಾತಿಗೆ ಬೆಂಕಿ ಹಚ್ಚಿ ಕೊಂದ ಪಾಪಿ….
ಡ್ರಗ್ಸ್ ತೆಗೆದುಕೊಳ್ಳುವುದನ್ನ ವಿರೋಧಿಸಿದ್ದಕ್ಕೆ ಲಿವಿಂಗ್ ಇನ್ ರಿಲೆಶನ್ ಶಿಪ್ ನಲ್ಲಿದ್ದ ಮಹಿಳೆಯನ್ನ ವ್ಯಕ್ತಿಯೊಬ್ಬ ಸಜೀವವಾಗಿ ಬೆಂಕಿ ಹಚ್ಚಿ ಕೊಲೆ ಮಾಡಿರುವ ಘಟನೆ ದೆಹಲಿಯ ಅಮನ್ ವಿಹಾರ್ನಲ್ಲಿ ನಡೆದಿದೆ.
ಫೆ.11ರಂದು ಸುಟ್ಟಗಾಯಗಳಿಂದಾಗಿ ಮಹಿಳೆಯನ್ನ ಎಸ್ಜಿಎಂ ಆಸ್ಪತ್ರೆಗೆ ದಾಖಲಿಸಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿತ್ತು. ಪೊಲೀಸರು ಆಸ್ಪತ್ರೆಗೆ ತಲುಪಿದಾಗ, ಮಹಿಳೆ ತನ್ನ ಹೇಳಿಕೆಯನ್ನು ದಾಖಲಿಸಲು ಸಾಧ್ಯವಾಗದಂತಹ ಚಿಂತಾಜನಕ ಸ್ಥಿತಿಯಲ್ಲಿದ್ದಳು.
ನಂತರ ಆಕೆಯನ್ನ ಪಾದರಕ್ಷೆ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ದೆಹಲಿಯ ಬಲ್ಬೀರ್ ವಿಹಾರ್ ನಿವಾಸಿ ಎಂದು ಗುರುತಿಸಲಾಗಿದೆ. ಸಂತ್ರಸ್ತೆ ತನ್ನ ಪತಿಯನ್ನ ತೊರೆದು ಕಳೆದ 6 ವರ್ಷಗಳಿಂದ ಮೋಹಿತ್ ಎಂದು ಗುರುತಿಸಲಾದ ಆರೋಪಿಯೊಂದಿಗೆ ವಾಸಿಸುತ್ತಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ಆಕೆಯ ಕುಟುಂಬ ಸದಸ್ಯರ ಹೇಳಿಕೆಯ ಆಧಾರದ ಮೇಲೆ ಅಮನ್ ವಿಹಾರ್ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಫೆಬ್ರವರಿ 10 ರ ರಾತ್ರಿ ಮೋಹಿತ್ ತನ್ನ ಸ್ನೇಹಿತನ ಜೊತೆ ಡ್ರಗ್ಸ್ ಸೇವಿಸುತ್ತಿರುವುದನ್ನ ಕಂಡು ಮಹಿಳೆ ಮೋಹಿತ್ ಜೊತೆ ಜಗಳವಾಡಿದ್ದಾಳೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಆರೋಪಿಗಳು ಆಕೆಯ ಮೇಲೆ ‘ಟಾರ್ಪಿನ್ ಆಯಿಲ್’ ಸುರಿದು ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಧ್ಯ ಮೋಹಿತ್ ನನ್ನ ಬಂಧಿಸಲಾಗಿದ್ದು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Delhi woman set on fire by live-in partner after argument over drugs, dies