ದೆಹಲಿನಲ್ಲಿ ಆಯೋಜಿಸಲಾದ ‘AI ಇಂಪ್ಯಾಕ್ಟ್ ಸಮಿಟ್’ನ ಒಂದು ವಿಡಿಯೋ ಇದೀಗ ಎಲ್ಲರ ಗಮನ ಸೆಳೆಯುತ್ತಿದೆ. ಈ ವಿಡಿಯೋದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಸುಂದರ್ ಪಿಚೈ, ಸ್ಯಾಮ್ ಆಲ್ಟ್ಮನ್ ಸೇರಿದಂತೆ ಜಾಗತಿಕ ತಂತ್ರಜ್ಞಾನ ಕ್ಷೇತ್ರದ ನಾಯಕರು ಒಂದೇ ಫ್ರೇಮ್ನಲ್ಲಿ ಕಾಣಿಸಿಕೊಂಡಿದ್ದಾರೆ.
ಇದಲ್ಲದೆ ಮೆಟಾ ಹಾಗೂ ಆಂಥೋಪಿಕ್ ಸಂಸ್ಥೆಗಳ ಪ್ರತಿನಿಧಿಗಳು ಸಹ ಈ ಮಹತ್ವದ ಸಮಾವೇಶದಲ್ಲಿ ಭಾಗವಹಿಸಿದ್ದರು. ಭಾರತವನ್ನು ಕೃತಕ ಬುದ್ಧಿಮತ್ತೆ (AI) ಕ್ಷೇತ್ರದಲ್ಲಿ ಜಾಗತಿಕ ಹಬ್ ಆಗಿ ರೂಪಿಸುವ ಉದ್ದೇಶದಿಂದ ಈ ಸಮ್ಮೇಳನ ಆಯೋಜಿಸಲಾಗಿತ್ತು.
ಜಾಗತಿಕ ಟೆಕ್ ದಿಗ್ಗಜರ ಉಪಸ್ಥಿತಿ, ಭಾರತದ ಡಿಜಿಟಲ್ ಸಾಮರ್ಥ್ಯ ಮತ್ತು ಭವಿಷ್ಯದ ತಂತ್ರಜ್ಞಾನ ಅಭಿವೃದ್ಧಿಯಲ್ಲಿ ದೇಶ ವಹಿಸಬಹುದಾದ ನಾಯಕತ್ವವನ್ನು ಪ್ರತಿಬಿಂಬಿಸುತ್ತದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. AI ಕ್ಷೇತ್ರದಲ್ಲಿ ಹೂಡಿಕೆ, ಸಂಶೋಧನೆ ಹಾಗೂ ಸಹಕಾರದ ಮೂಲಕ ಭಾರತ ವಿಶ್ವ ಮಟ್ಟದಲ್ಲಿ ಪ್ರಮುಖ ಪಾತ್ರವಹಿಸಲಿದೆ ಎಂಬ ಸಂದೇಶವನ್ನು ಈ ವಿಡಿಯೋ ಒತ್ತಿ ಹೇಳುತ್ತದೆ.
ಈ ಸಮ್ಮೇಳನವು ಭಾರತದ ತಂತ್ರಜ್ಞಾನ ಭವಿಷ್ಯದ ದಿಕ್ಕನ್ನು ನಿರ್ಧರಿಸುವ ಮಹತ್ವದ ಹೆಜ್ಜೆಯಾಗಿ ಪರಿಗಣಿಸಲಾಗಿದೆ.








