ಇತ್ತೀಚೆಗೆ ವಂದೇ ಭಾರತ್ ದೇಶಾದ್ಯಂತ ಸಂಚರಿಸುತ್ತಿದ್ದು, ಪ್ರಯಾಣಿಕರ ಸಂಖ್ಯೆಯಲ್ಲಿ ಕೂಡ ಏರಿಕೆಯಾಗಿದೆ. ಆದರೆ, ಇತ್ತೀಚೆಗೆ ಸಿಗುವ ಆಹಾರದ ಗುಣಮಟ್ಟ ಕಳಪೆಯಾಗಿದೆ ಎಂಬ ದೂರುಗಳು ಹೆಚ್ಚಾಗಿ ಕೇಳಿ ಬರುತ್ತಿವೆ. ಈಗ ಮತ್ತೊಂದು ಇಂತಹ ಪ್ರಕರಣ ಬೆಳಕಿಗೆ ಬಂದಿದೆ.
ಹಳಸಿದ ಊಟವನ್ನು ನೀಡಲಾಗುತ್ತಿದೆ ಎಂದು ಪ್ರಯಾಣಿಕರು ಆಕ್ರೋಶಗೊಂಡಿದ್ದಾರೆ. ನವದೆಹಲಿಯಿಂದ ವಾರಣಾಸಿಗೆ ವಂದೇ ಭಾರತ್ ಎಕ್ಸ್‌ಪ್ರೆಸ್ನಲ್ಲಿ ಪ್ರಯಾಣ ಬೆಳೆಸಿದ ಸಮಯದಲ್ಲಿ ಈ ಘಟನೆ ಬೆಳಕಿಗೆ ಬಂದಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಆಕಾಶ್ ಕೇಶಾರಿ ಎಂಬ ಪ್ರಯಾಣಿಕರೊಬ್ಬರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ನೀಡಲಾದ ಕಳಪೆ ಆಹಾರದ ಕುರಿತು ಆರೋಪಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಎನ್ಡಿಎಲ್ಎಸ್ ನಿಂದ ಬಿಎಸ್ಬಿಗೆ 22416 ರೈಲಿನಲ್ಲಿ ಪ್ರಯಾಣ ನಡೆಸಿದ್ದೆ. ಈ ವೇಳೆ ನೀಡಲಾದ ಆಹಾರವು ವಾಸನೆ ಮತ್ತು ಅತ್ಯಂತ ಕಳಪೆ ಗುಣಮಟ್ಟವಾಗಿದೆ. ದಯವಿಟ್ಟು ನನ್ನ ಎಲ್ಲಾ ಹಣ ಮರು ಪಾವತಿ ಮಾಡಿ. ಈ ಮಾರಾಟಗಾರರು ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಬ್ರಾಂಡ್ ಹಾಳು ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.