ಕೋವಿಡ್ ವೈರಸ್ – ವಿಶ್ವಾದ್ಯಂತ ಸುಮಾರು 100 ದೇಶಗಳಲ್ಲಿ ಡೆಲ್ಟಾ ತಳಿ ಪತ್ತೆ
ಚೀನಾದಿಂದ ಇಡೀ ವಿಶ್ವಕ್ಕೆ ಹರಡಿರುವ ಕೊರೊನಾ ಮಹಾಮಾರಿಯ ಅಟ್ಟಹಾಸಕ್ಕೆ 2 ವರ್ಷಗಳಿಂದ ಜಗತ್ತಿನ ಜನರು ಕಷ್ಟ ಪಡ್ತಿದ್ದಾರೆ.. ಲಾಕ್ ಡೌನ್ , ಕ್ವಾರಂಟೈನ್ ನಿಂದಾಗಿ ಜನರು ಮಾನಸಿಕ ಖಿನ್ನತೆಗೂ ಒಳಗಾಗ್ತಿದ್ದಾರೆ.. ಮತ್ತೊಂದೆಡೆ ಕೆಲಸಗಳಿಲ್ಲದೆ ಅದೆಷ್ಟೋ ಕುಟುಂಬಗಳು ಪರದಾಡಿವೆ.. ಇನ್ನೂ ಕಡುಬಡವರು ಒಂದು ಹೊತ್ತಿನ ಊಟಕ್ಕೂ ಪರಿತಪಿಸಿದ್ದಾರೆ… ಕೂಲಿ ಕಾರ್ಮಿಕರು ಕಷ್ಟ ಪಟ್ಟಿದ್ದಾರೆ.. ಇದೇ ಪರಿಸ್ಥಿತಿ ಬಾರತದಲ್ಲೂ ಇದೆ.. ಅದ್ರಲ್ಲೂ ಇಡೀ ವಿಶ್ವಾದ್ಯಂತ ಕೊರೊನಾ 2ನೇ ಹಾವಳಿ ಸಾಕಷ್ಟು ಅವಾಂತರ ಸೃಷ್ಟಿಸಿದೆ… ಕೋಟ್ಯಾಂತರ ಜನರ ಬದುಕು ಮೂರಾಬಟ್ಟೆಯಾಗಿದೆ… ಸಾವಿರಾರು ಮಕ್ಕಳು ತಂದೆ ಅಥವ ತಾಯ ಇಲ್ಲಾ ಇಬ್ಬರನ್ನೂ ಕಳೆದುಕೊಂಡಿದ್ದಾರೆ. ಲಕ್ಷಾಂತರ ಜನರು ಜೀವನ ಕಳೆದುಕೊಂಡಿದ್ದಾರೆ.. ಆಪ್ತರನ್ನ , ಸ್ನೇಹಿತರು , ಕುಟುಂಬದವರನ್ನ ಕಳೆದುಕೊಂಡು ಜನರು ಕೊರೊನಾ ಮಹಾಮಾರಿ ಹಾಗೂ ಅದರ ಜನ್ಮಸ್ಥಳ ಚೈನಾಗೆ ಹಿಡಿ ಶಾಪ ಹಾಕ್ತಿದ್ದಾರೆ..
ಈ ನಡುವೆ ಕೋವಿಡ್–19ರ ಡೆಲ್ಟಾ ರೂಪಾಂತರ ತಳಿಯು ವೇಗವಾಗಿ ಮತ್ತು ವ್ಯಾಪಕವಾಗಿ ಹರಡುತ್ತಿದೆ. ಜಗತ್ತಿನಾದ್ಯಂತ ಮತ್ತೊಂದು ಬಾರಿ ಕೋವಿಡ್ ಪ್ರಕರಣಗಳು ಹೆಚ್ಚಳವಾಗಲು ಇದು ಕಾರಣವಾಗಬಹುದು ಎಂಬ ಆತಂಕ ವ್ಯಕ್ತವಾಗಿದೆ. ಸುಮಾರು 100 ದೇಶಗಳಲ್ಲಿ ಡೆಲ್ಟಾ ರೂಪಾಂತರ ತಳಿ ಪತ್ತೆಯಾಗಿದೆ. ಅತಿ ವೇಗವಾಗಿ ಹರಡುವ ಸಾಮರ್ಥ್ಯ ಇರುವ ಈ ತಳಿಯು ಜಗತ್ತಿನಲ್ಲಿ ಅತ್ಯಂತ ವ್ಯಾಪಕವಾಗಿರುವ ಕೊರೊನಾ ವೈರಾಣು ತಳಿ ಎನಿಸಿಕೊಳ್ಳಲಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯು ಎಚ್ಚರಿಕೆ ನೀಡಿದೆ.
ಆಕ್ಲಾಂಡ್ ನ ಮೃಗಾಲಯದಲ್ಲಿ ಪ್ರಾಣಿಗಳಿಗೆ ಕೋವಿಡ್ ಲಸಿಕೆ
ಇನ್ನೂ 96 ದೇಶಗಳಲ್ಲಿ ಡೆಲ್ಟಾ ರೂಪಾಂತರ ತಳಿಯು ಪತ್ತೆಯಾಗಿದೆ. ತಳಿಗಳನ್ನು ಗುರುತಿಸುವ ಸಾಮರ್ಥ್ಯಕ್ಕೆ ಮಿತಿ ಇದೆ. ಹಾಗಾಗಿ, ಇನ್ನೂ ಹೆಚ್ಚಿನ ದೇಶಗಳಲ್ಲಿಯೂ ಈ ತಳಿ ಇರುವ ಸಾಧ್ಯತೆ ಇದೆ. ಪ್ರಕರಣಗಳ ಸಂಖ್ಯೆ ಹೆಚ್ಚಳ ಮತ್ತು ರೋಗಿಗಳು ಆಸ್ಪತ್ರೆಗೆ ದಾಖಲಾಗಲು ಈ ತಳಿ ಕಾರಣವಾಗುತ್ತಿದೆ ಎಂದು ಹಲವು ದೇಶಗಳು ಹೇಳಿವೆ’ ಎಂದು ಆರೋಗ್ಯ ಸಂಸ್ಥೆ ತಿಳಿಸಿದೆ.
ಮುಂದಿನ ಕೆಲವು ತಿಂಗಳುಗಳಲ್ಲಿ ಈ ವೈರಾಣು ತಳಿಯು ಇತರ ಎಲ್ಲ ತಳಿಗಳನ್ನು ಹಿಂದಿಕ್ಕಿ ಅತ್ಯಂತ ಅಪಾಯಕಾರಿ ತಳಿ ಎನಿಸಿಕೊಳ್ಳಲಿದೆ ಎಂದು ಅದು ಎಚ್ಚರಿಸಿದೆ. ವ್ಯಕ್ತಿ, ಸಮುದಾಯ ಮತ್ತು ಸಮಾಜ ಮಟ್ಟದಲ್ಲಿ ಸೋಂಕು ತಡೆ ಮತ್ತು ನಿಯಂತ್ರಣದ ಎಲ್ಲ ಲಭ್ಯ ಕ್ರಮಗಳನ್ನು ಸಾಂಕ್ರಾಮಿಕದ ಆರಂಭದಿಂದಲೇ ಜಾರಿಗೆ ತರಲಾಗಿದೆ. ಅವೇ ಕ್ರಮಗಳು ಡೆಲ್ಟಾ ತಳಿಯ ತಡೆಗೂ ಅನ್ವಯ ಆಗಲಿವೆ. ಅಂದರೆ, ಅಂತರ ಕಾಯ್ದುಕೊಳ್ಳುವಿಕೆ, ಮಾಸ್ಕ್ ಧರಿಸುವಿಕೆಯಂತಹ ಕ್ರಮಗಳನ್ನು ಪಾಲಿಸಬೇಕು ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.
ರೂಪಾಂತರ ತಳಿಯು ಹೆಚ್ಚು ವೇಗವಾಗಿ ಮತ್ತು ವ್ಯಾಪಕವಾಗಿ ಹರಡುತ್ತದೆ ಎಂದಾದರೆ, ಅದನ್ನು ತಡೆಯುವುದಕ್ಕೆ ಕೈಗೊಳ್ಳುವ ಕ್ರಮಗಳು ದೀರ್ಘ ಕಾಲ ಜಾರಿಯಲ್ಲಿ ಇರಬೇಕಾಗುತ್ತದೆ ಎಂದೂ ಡಬ್ಲ್ಯುಎಚ್ಒ ತಿಳಿಸಿದೆ. ಡೆಲ್ಟಾ ತಳಿಯು ಈವರೆಗೆ ಪತ್ತೆಯಾದ ತಳಿಗಳಲ್ಲಿ ಅತ್ಯಂತ ವೇಗವಾಗಿ ಹರಡುವಂತಹುದು ಎಂದು ಡಬ್ಲ್ಯುಎಚ್ಒ ಮಹಾ ನಿರ್ದೇಶಕ ಟೆಡ್ರೊಸ್ ಗೆಬ್ರೇಷಿಯಸ್ ಕಳೆದ ವಾರ ಹೇಳಿದ್ದರು.