‘ಡೆಲ್ಟಾ’ದಿಂದ ಉಂಟಾಗುವ ಸಾವು ತಡೆಗಟ್ಟುವಲ್ಲಿ ಭಾರತದ ಲಸಿಕೆಗಳು 95 % ಪರಿಣಾಮಕಾರಿ..!
ಕೊರೊನಾ 2ನೇ ಅಲೆ ದೇಶದ ಜನತೆಯನ್ನು ಇನ್ನಿಲ್ಲದಂತೆ ಕಾಡಿದೆ. ಈ ಅಲೆಯಲ್ಲಿ ಅಪಾರ ಪ್ರಮಾಣದ ಸಾವು-ನೋವು ಸಂಭವಿಸಿದ್ದು, ಇದರ ಜೊತೆಗೆ ಬ್ಲಾಕ್, ವೈಟ್ ಫಂಗಸ್ , ಯೆಲ್ಲೂ, ಹಸರು ಫಂಗಸ್ , ಡೆಲ್ಟಾ , ಲ್ಯಾಂಬ್ಡಾ , ಜಿಕಾ , ಕಪ್ಪಾ ವೈರಸ್ ಳ ಆಕಂತ ಜನರನ್ನ ಆತಂಕಕ್ಕೆ ಈಡು ಮಾಡಿದೆ.. ಈ ನಡುವೆ ಕೋವಿಡ್ 3ನೇ ಅಲೆ ಎಚ್ಚರಿಕೆ ನೀಡಲಾಗಿದ್ದು, ಇದರ ಪರಿನಾಮವೂ ಅಷ್ಟೇ ಭೀಕರವಾಗಿರಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.
ಈ ನಡುವೆ ಕೋವಿಡ್ 19 ಲಸಿಕೆಗಳಾದ ಕೋವಿಶೀಲ್ಡ್ ಹಾಗೂ ಕೊವ್ಯಾಕ್ಸಿನ್ಗಳು ಕೊರೊನಾ ಸಾವಿನ ಪ್ರಮಾಣವನ್ನ ತಡೆಗಟ್ಟುವಲ್ಲಿ 95 ಪ್ರತಿಶತ ಯಶಸ್ವಿಯಾಗಿದೆ ಎಂದು ಐಸಿಎಂಆರ್ ತನ್ನ ಅಧ್ಯಯನದ ಮೂಲಕ ಹೇಳಿದೆ. ಕೊರೊನಾ ಎರಡನೆ ಅಲೆಯು ಉತ್ತುಂಗದಲ್ಲಿ ಇರುವಾಗ ಅಂದರೆ ಡೆಲ್ಟಾ ರೂಪಾಂತರಿ ವೈರಸ್ ದೇಶದಲ್ಲಿದ್ದ ಸಂದರ್ಭದಲ್ಲಿ ಈ ಅಧ್ಯಯನವನ್ನ ನಡೆಸಲಾಗಿತ್ತು ಎಂದು ನೀತಿ ಆಯೋಗದ ಸದಸ್ಯ ವಿ ಕೆ ಪಾಲ್ ಹೇಳಿದ್ದಾರೆ.
ತಮಿಳುನಾಡಿನ 1,17,525 ಮಂದಿ ಪೊಲೀಸ್ ಅಧಿಕಾರಿಗಳ ಮೇಲೆ ಈ ಅಧ್ಯಯನ ನಡೆಸಲಾಗಿತ್ತು. ಇದರಲ್ಲಿ 17,059 ಮಂದಿ ಪೊಲೀಸರು ಯಾವುದೇ ಲಸಿಕೆಯನ್ನ ಸ್ವೀಕರಿಸಿರಲಿಲ್ಲ. 32,792 ಮಂದಿ ಪೊಲೀಸರು ಮೊದಲ ಡೋಸ್ ಹಾಗೂ 67,673 ಮಂದಿ ಕೊರೊನಾ 2ನೇ ಡೋಸ್ಗಳನ್ನ ಸ್ವೀಕರಿಸಿದ್ದರು. ಕೊರೊನಾ ಲಸಿಕೆ ಪಡೆಯದವರಲ್ಲಿ 20 ಮಂದಿ, ಮೊದಲ ಡೋಸ್ ಪಡೆದವರಲ್ಲಿ 7 ಮಂದಿ ಹಾಗೂ ಎರಡೂ ಡೋಸ್ಗಳನ್ನ ಸ್ವೀಕರಿಸಿದವರಲ್ಲಿ ಕೇವಲ 4 ಮಂದಿ ಮಾತ್ರ ಸೋಂಕಿಗೆ ಬಲಿಯಾಗಿದ್ದಾರೆ.
ಈ ಎಲ್ಲಾ ದತ್ತಾಂಶಗಳನ್ನ ಅವಲೋಕಿಸಿ ನೋಡಿದಾಗ ಮೊದಲ ಡೋಸ್ ಲಸಿಕೆಯು ಕೊರೊನಾ ಸಾವನ್ನ ತಡೆಯುವಲ್ಲಿ 82 ಪ್ರತಿಶತದಷ್ಟು ಯಶಸ್ವಿಯಾದರೆ ಎರಡೂ ಡೋಸ್ ಲಸಿಕೆಯು 95 ಪ್ರತಿಶತದಷ್ಟು ಕೊರೊನಾ ಸಾವನ್ನ ತಡೆಗಟ್ಟುವಲ್ಲಿ ಯಶಸ್ವಿಯಾಗಿದೆ. ದೇಶದಲ್ಲಿ ಕೊರೊನಾ 2ನೆ ಅಲೆ ಮಿತಿಮೀರಿದ್ದ ಸಂದರ್ಭದಲ್ಲಿ ಅಂದರೆ ಡೆಲ್ಟಾ ರೂಪಾಂತರಿಗಳು ವ್ಯಾಪಿಸುತ್ತಿದ್ದಾಗಲೇ ಈ ಅಧ್ಯಯನವನ್ನ ನಡೆಸಲಾಗಿತ್ತು ಎಂದು ಅವರು ಹೇಳಿದ್ದಾರೆ.
ಚೀನಾದಿಂದ ಇಡೀ ವಿಶ್ವಕ್ಕೆ ಹರಡಿರುವ ಕೊರೊನಾ ಮಹಾಮಾರಿಯ ಅಟ್ಟಹಾಸಕ್ಕೆ 2 ವರ್ಷಗಳಿಂದ ಜಗತ್ತಿನ ಜನರು ಕಷ್ಟ ಪಡ್ತಿದ್ದಾರೆ.. ಲಾಕ್ ಡೌನ್ , ಕ್ವಾರಂಟೈನ್ ನಿಂದಾಗಿ ಜನರು ಮಾನಸಿಕ ಖಿನ್ನತೆಗೂ ಒಳಗಾಗ್ತಿದ್ದಾರೆ.. ಮತ್ತೊಂದೆಡೆ ಕೆಲಸಗಳಿಲ್ಲದೆ ಅದೆಷ್ಟೋ ಕುಟುಂಬಗಳು ಪರದಾಡಿವೆ.. ಇನ್ನೂ ಕಡುಬಡವರು ಒಂದು ಹೊತ್ತಿನ ಊಟಕ್ಕೂ ಪರಿತಪಿಸಿದ್ದಾರೆ… ಕೂಲಿ ಕಾರ್ಮಿಕರು ಕಷ್ಟ ಪಟ್ಟಿದ್ದಾರೆ.. ಇದೇ ಪರಿಸ್ಥಿತಿ ಬಾರತದಲ್ಲೂ ಇದೆ.. ಅದ್ರಲ್ಲೂ ಇಡೀ ವಿಶ್ವಾದ್ಯಂತ ಕೊರೊನಾ 2ನೇ ಹಾವಳಿ ಸಾಕಷ್ಟು ಅವಾಂತರ ಸೃಷ್ಟಿಸಿದೆ… ಕೋಟ್ಯಾಂತರ ಜನರ ಬದುಕು ಮೂರಾಬಟ್ಟೆಯಾಗಿದೆ… ಸಾವಿರಾರು ಮಕ್ಕಳು ತಂದೆ ಅಥವ ತಾಯ ಇಲ್ಲಾ ಇಬ್ಬರನ್ನೂ ಕಳೆದುಕೊಂಡಿದ್ದಾರೆ. ಲಕ್ಷಾಂತರ ಜನರು ಜೀವನ ಕಳೆದುಕೊಂಡಿದ್ದಾರೆ.. ಆಪ್ತರನ್ನ , ಸ್ನೇಹಿತರು , ಕುಟುಂಬದವರನ್ನ ಕಳೆದುಕೊಂಡು ಜನರು ಕೊರೊನಾ ಮಹಾಮಾರಿ ಹಾಗೂ ಅದರ ಜನ್ಮಸ್ಥಳ ಚೈನಾಗೆ ಹಿಡಿ ಶಾಪ ಹಾಕ್ತಿದ್ದಾರೆ..
ಭಾರತೀಯ ನೌಕಾಪಡೆಗೆ ಮತ್ತಷ್ಟು ಬಲ : ಎಂಹೆಚ್-60ಆರ್ ಹೆಲಿಕಾಪ್ಟರ್ ಹಸ್ತಾಂತರ
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.