ಭಾರತದಲ್ಲಿ ಜಾನ್ಸನ್ ಆ್ಯಂಡ್ ಜಾನ್ಸನ್ ಕೋವಿಡ್ ಲಸಿಕೆ ತುರ್ತು ಬಳಕೆಗೆ ಅನುಮತಿ
ನವದೆಹಲಿ: ಕೊರೊನಾ 2ನೇ ಅಲೆ ದೇಶದ ಜನತೆಯನ್ನು ಇನ್ನಿಲ್ಲದಂತೆ ಕಾಡಿದೆ. ಈ ಅಲೆಯಲ್ಲಿ ಅಪಾರ ಪ್ರಮಾಣದ ಸಾವು-ನೋವು ಸಂಭವಿಸಿದ್ದು, ಇದರ ಜೊತೆಗೆ ಬ್ಲಾಕ್, ವೈಟ್ ಫಂಗಸ್ , ಯೆಲ್ಲೂ, ಹಸರು ಫಂಗಸ್ , ಡೆಲ್ಟಾ , ಲ್ಯಾಂಬ್ಡಾ , ಜಿಕಾ , ಕಪ್ಪಾ ವೈರಸ್ ಳ ಆಕಂತ ಜನರನ್ನ ಆತಂಕಕ್ಕೆ ಈಡು ಮಾಡಿದೆ.. ಈ ನಡುವೆ ಕೋವಿಡ್ 3ನೇ ಅಲೆ ಎಚ್ಚರಿಕೆ ನೀಡಲಾಗಿದ್ದು, ಇದರ ಪರಿನಾಮವೂ ಅಷ್ಟೇ ಭೀಕರವಾಗಿರಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.
ಇದ್ರ ನಡುವೆ ಲಸಿಕೆ ಕೊರತೆಯಿಂದಾಗಿ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.. ಈ ನಡುವೆ ಅಮೆರಿಕ ಮೂಲದ ಖ್ಯಾತ ಔಷಧ ತಯಾರಿಕಾ ಸಂಸ್ಥೆ ಜಾನ್ಸನ್ ಆ್ಯಂಡ್ ಜಾನ್ಸನ್ ಅಭಿವೃದ್ಧಿ ಪಡಿಸಿರುವ ಸಿಂಗಲ್ ಡೋಸ್ ಕೋವಿಡ್ ಲಸಿಕೆಯ ತುರ್ತು ಬಳಕೆಗೆ ಭಾರತ ಸರ್ಕಾರ ಅನುಮತಿ ನೀಡಿದೆ.
ಜಾನ್ಸನ್ ಆ್ಯಂಡ್ ಜಾನ್ಸನ್ ಕಂಪನಿಯು ತನ್ನ ಸಿಂಗಲ್ ಡೋಸ್ ಕೋವಿಡ್-19 ಲಸಿಕೆಯನ್ನು ಭಾರತಕ್ಕೆ ತರಲು ಈಗಾಗಲೇ ಹಲವು ಪ್ರಯತ್ನಗಳನ್ನು ಮಾಡಿತ್ತು. ಬಳಿಕ 2021ರ ಆಗಸ್ಟ್ 5 ರಂದು ಜಾನ್ಸನ್ ಆ್ಯಂಡ್ ಜಾನ್ಸನ್ ಪ್ರೈವೇಟ್ ಲಿಮಿಟೆಡ್ ತನ್ನ ಸಿಂಗಲ್ ಡೋಸ್ ಕೋವಿಡ್-19 ಲಸಿಕೆಯ ತುರ್ತು ಬಳಕೆಗೆ ಅನುಮತಿ ಕೊಡಿಸಲು ಇಯುಎಗೆ ಅರ್ಜಿ ಸಲ್ಲಿಸಿತ್ತು. ಇದೀಗ ತುರ್ತು ಬಳಕೆಗೆ ಅವಕಾಶ ಕೊಡಲಾಗಿದೆ ಎಂದು ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ತಿಳಿಸಿದ್ದಾರೆ.
ಜಾನ್ಸನ್ ಆ್ಯಂಡ್ ಜಾನ್ಸನ್ ಸಂಸ್ಥೆಯ ಸಿಂಗಲ್ ಡೋಸ್ ಕೋವಿಡ್-19 ಲಸಿಕೆಯನ್ನು ಭಾರತದ ಜನರಿಗೆ ಮತ್ತು ಪ್ರಪಂಚದ ಇತರೆ ಭಾಗಗಳಿಗೆ ಬಯೋಲಾಜಿಕಲ್ ಇ ಲಿಮಿಟೆಡ್ ಸಹಯೋಗದೊಂದಿಗೆ ತರಲು ಸಂಸ್ಥೆ ತಯಾರಿ ನಡೆಸಿದೆ. ಜಾನ್ಸನ್ ಆ್ಯಂಡ್ ಜಾನ್ಸನ್ ಸಂಸ್ಥೆಯ ಕೋವಿಡ್ ಲಸಿಕೆಯು ಸೋಂಕಿನ ವಿರುದ್ಧ ಶೇ.85 ರಷ್ಟು ಪರಿಣಾಮಕಾರಿ ಎಂದು ಲಸಿಕಾ ಪ್ರಯೋಗಗಳಿಂದ ವರದಿಯಾಗಿದೆ.
ಚೀನಾದಿಂದ ಇಡೀ ವಿಶ್ವಕ್ಕೆ ಹರಡಿರುವ ಕೊರೊನಾ ಮಹಾಮಾರಿಯ ಅಟ್ಟಹಾಸಕ್ಕೆ 2 ವರ್ಷಗಳಿಂದ ಜಗತ್ತಿನ ಜನರು ಕಷ್ಟ ಪಡ್ತಿದ್ದಾರೆ.. ಲಾಕ್ ಡೌನ್ , ಕ್ವಾರಂಟೈನ್ ನಿಂದಾಗಿ ಜನರು ಮಾನಸಿಕ ಖಿನ್ನತೆಗೂ ಒಳಗಾಗ್ತಿದ್ದಾರೆ.. ಮತ್ತೊಂದೆಡೆ ಕೆಲಸಗಳಿಲ್ಲದೆ ಅದೆಷ್ಟೋ ಕುಟುಂಬಗಳು ಪರದಾಡಿವೆ.. ಇನ್ನೂ ಕಡುಬಡವರು ಒಂದು ಹೊತ್ತಿನ ಊಟಕ್ಕೂ ಪರಿತಪಿಸಿದ್ದಾರೆ… ಕೂಲಿ ಕಾರ್ಮಿಕರು ಕಷ್ಟ ಪಟ್ಟಿದ್ದಾರೆ.. ಇದೇ ಪರಿಸ್ಥಿತಿ ಬಾರತದಲ್ಲೂ ಇದೆ.. ಅದ್ರಲ್ಲೂ ಇಡೀ ವಿಶ್ವಾದ್ಯಂತ ಕೊರೊನಾ 2ನೇ ಹಾವಳಿ ಸಾಕಷ್ಟು ಅವಾಂತರ ಸೃಷ್ಟಿಸಿದೆ… ಕೋಟ್ಯಾಂತರ ಜನರ ಬದುಕು ಮೂರಾಬಟ್ಟೆಯಾಗಿದೆ… ಸಾವಿರಾರು ಮಕ್ಕಳು ತಂದೆ ಅಥವ ತಾಯ ಇಲ್ಲಾ ಇಬ್ಬರನ್ನೂ ಕಳೆದುಕೊಂಡಿದ್ದಾರೆ. ಲಕ್ಷಾಂತರ ಜನರು ಜೀವನ ಕಳೆದುಕೊಂಡಿದ್ದಾರೆ.. ಆಪ್ತರನ್ನ , ಸ್ನೇಹಿತರು , ಕುಟುಂಬದವರನ್ನ ಕಳೆದುಕೊಂಡು ಜನರು ಕೊರೊನಾ ಮಹಾಮಾರಿ ಹಾಗೂ ಅದರ ಜನ್ಮಸ್ಥಳ ಚೈನಾಗೆ ಹಿಡಿ ಶಾಪ ಹಾಕ್ತಿದ್ದಾರೆ..
ಕೋವಿಡ್ ನಿಂದ ಮೃತಪಟ್ಟವರ ಮನೆಗಳಿಗೆ ಡಾ.ಕೆ.ಸುಧಾಕರ್ ಭೇಟಿ : ₹1 ಲಕ್ಷ ಸಹಾಯಧನ ವಿತರಣೆ
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.