ದಕ್ಷಿಣ ಆಫ್ರಿಕಾ : ಡೆಲ್ಟಾ ಪ್ಲಸ್ ಆತಂಕ , ನಿರ್ಬಂಧಗಳನ್ನು ಕಠಿಣಗೊಳಿಸಿದ ಸರ್ಕಾರ
ದಕ್ಷಿಣ ಆಫ್ರಿಕಾ : ಚೀನಾದಿಂದ ಇಡೀ ವಿಶ್ವಕ್ಕೆ ಹರಡಿರುವ ಕೊರೊನಾ ಮಹಾಮಾರಿಯ ಅಟ್ಟಹಾಸಕ್ಕೆ 2 ವರ್ಷಗಳಿಂದ ಜಗತ್ತಿನ ಜನರು ಕಷ್ಟ ಪಡ್ತಿದ್ದಾರೆ.. ಲಾಕ್ ಡೌನ್ , ಕ್ವಾರಂಟೈನ್ ನಿಂದಾಗಿ ಜನರು ಮಾನಸಿಕ ಖಿನ್ನತೆಗೂ ಒಳಗಾಗ್ತಿದ್ದಾರೆ..
ಮತ್ತೊಂದೆಡೆ ಕೆಲಸಗಳಿಲ್ಲದೆ ಅದೆಷ್ಟೋ ಕುಟುಂಬಗಳು ಪರದಾಡಿವೆ.. ಇನ್ನೂ ಕಡುಬಡವರು ಒಂದು ಹೊತ್ತಿನ ಊಟಕ್ಕೂ ಪರಿತಪಿಸಿದ್ದಾರೆ… ಕೂಲಿ ಕಾರ್ಮಿಕರು ಕಷ್ಟ ಪಟ್ಟಿದ್ದಾರೆ.. ಇದೇ ಪರಿಸ್ಥಿತಿ ಬಾರತದಲ್ಲೂ ಇದೆ.. ಅದ್ರಲ್ಲೂ ಇಡೀ ವಿಶ್ವಾದ್ಯಂತ ಕೊರೊನಾ 2ನೇ ಹಾವಳಿ ಸಾಕಷ್ಟು ಅವಾಂತರ ಸೃಷ್ಟಿಸಿದೆ…
ಕೋಟ್ಯಾಂತರ ಜನರ ಬದುಕು ಮೂರಾಬಟ್ಟೆಯಾಗಿದೆ… ಸಾವಿರಾರು ಮಕ್ಕಳು ತಂದೆ ಅಥವ ತಾಯ ಇಲ್ಲಾ ಇಬ್ಬರನ್ನೂ ಕಳೆದುಕೊಂಡಿದ್ದಾರೆ. ಲಕ್ಷಾಂತರ ಜನರು ಜೀವನ ಕಳೆದುಕೊಂಡಿದ್ದಾರೆ.. ಆಪ್ತರನ್ನ , ಸ್ನೇಹಿತರು , ಕುಟುಂಬದವರನ್ನ ಕಳೆದುಕೊಂಡು ಜನರು ಕೊರೊನಾ ಮಹಾಮಾರಿ ಹಾಗೂ ಅದರ ಜನ್ಮಸ್ಥಳ ಚೈನಾಗೆ ಹಿಡಿ ಶಾಪ ಹಾಕ್ತಿದ್ದಾರೆ..
ಇದೀಗ ಕೊರೋನ ವೈರಸ್ ಸೋಂಕಿನ ಜತೆಗೆ, ರೂಪಾಂತರಿತ ವೈರಸ್ ಡೆಲ್ಟಾ ಸೋಂಕು ಪ್ರಕರಣ ಉಲ್ಬಣಗೊಂಡಿರುವುದರಿಂದ ದಕ್ಷಿಣ ಆಫ್ರಿಕಾ ಸರಕಾರ ನಿರ್ಬಂಧಗಳನ್ನು ಇನ್ನಷ್ಟು ಕಠಿಣಗೊಳಿಸಿದೆ. 4ನೇ ಹಂತದ ಲಾಕ್ಡೌನ್ ಜಾರಿಯಲ್ಲಿದ್ದು , ಕರ್ಫ್ಯೂ ಜಾರಿಗೊಳಿಸಲಾಗಿದೆ. ಎಲ್ಲಾ ರೀತಿಯ ಸಭೆ ಸಮಾರಂಭಗಳನ್ನು ನಿಷೇಧಿಸಲಾಗಿದೆ ಎಂದು ಸರಕಾರ ಘೋಷಿಸಿದೆ.
ಹೊಸ ನಿರ್ಬಂಧಗಳು ಮೇ 27ರ ಮಧ್ಯರಾತ್ರಿಯಿಂದ ಮುಂದಿನ 15 ದಿನ ಚಾಲ್ತಿಯಲ್ಲಿರುತ್ತವೆ. ಆ ಬಳಿಕ ಪರಿಸ್ಥಿತಿ ಗಮನಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ದೇಶದ ಅಧ್ಯಕ್ಷ ಸಿರಿಲ್ ರಮಾಫೋಸ ಘೋಷಿಸಿದ್ದಾರೆ.
ಸೋಂಕಿನ ಪ್ರಕರಣಗಳ 60%ಕ್ಕೂ ಅಧಿಕ ಪ್ರಕರಣ ಆರ್ಥಿಕ ಚಟುವಟಿಕೆಯ ಕೇಂದ್ರ ಎನಿಸಿರುವ ಗೌಟೆಂಗ್ ಪ್ರಾಂತ್ಯದಲ್ಲೇ ದಾಖಲಾಗಿರುವುದರಿಂದ ಇಲ್ಲಿ ಹೆಚ್ಚುವರಿ ನಿರ್ಬಂಧ ಜಾರಿಯಾಗಿದೆ. ವ್ಯಾಪಾರದ ಉದ್ದೇಶ, ಅಥವಾ ಹುಟ್ಟೂರಿಗೆ ವಾಪಸಾಗುವವರನ್ನು ಹೊರತುಪಡಿಸಿ, ಈ ನಗರಕ್ಕೆ ಬರುವ ಅಥವಾ ನಗರದಿಂದ ಹೊರಗೆ ಹೋಗುವುದನ್ನು ನಿಷೇಧಿಸಲಾಗಿದೆ.
ಪಂಜಾಬ್ ವಿಧಾನಸಭೆ ಚುನಾವಣೆ – AAP ಗೆದ್ರೆ ವಿದ್ಯುತ್ ಫ್ರೀ – ಕೇಜ್ರಿವಾಲ್