ಬೆಂಗಳೂರು : ರಾಜ್ಯಾದ್ಯಂತ ಡೆಂಗ್ಯೂ (Dengue) ಪ್ರಕರಣ ಹೆಚ್ಚಳವಾಗುತ್ತಿದ್ದು, ಅಗತ್ಯ ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಅವರು ಆರೋಗ್ಯ ಇಲಾಖೆಗೆ ಸೂಚಿಸಿದ್ದಾರೆ.
ರಾಜ್ಯದಲ್ಲಿ ಕಳೆದ ಕೆಲವು ದಿನಗಳಲ್ಲಿ 7 ಸಾವಿರಕ್ಕೂ ಅಧಿಕ ಪ್ರಕರಣಗಳು ದಾಖಲಾಗಿವೆ. ಹೀಗಾಗಿ ಕ್ಷಿಪ್ರ ಗತಿಯಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಇಲಾಖೆಗಳ ಅಧಿಕಾರಿಗಳೊಂದಿಗೆ ಮಾತನಾಡಿ ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.
ಬೆಂಗಳೂರು ವ್ಯಾಪ್ತಿಯಲ್ಲಿ ಸೊಳ್ಳೆ ನಿಯಂತ್ರಣಕ್ಕೆ ಔಷಧ ಸಿಂಪಡಣೆ, ನೀರು ಶೇಖರಣೆಯಾಗುವ ಸ್ಥಳಗಳನ್ನು ಗುರುತಿಸಿ ಸ್ವಚ್ಚಗೊಳಿಸುವುದು ಸೇರಿದಂತೆ ಸೊಳ್ಳೆ ನಿಯಂತ್ರಣಕ್ಕೆ ಪರಿಣಾಮಕಾರಿ ಮಾರ್ಗಗಳನ್ನು ಅನುಸರಿಸುವಂತೆ ಸೂಚಿಸಿದ್ದಾರೆ.
ಈಗಾಗಲೇ ರಾಜ್ಯದಲ್ಲಿ ಡೆಂಗ್ಯೂ ರೋಗಕ್ಕೆ 7 ಜನ ಬಲಿಯಾಗಿದ್ದಾರೆ. ಕಳೆದ ಮೂರು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಸಾವು ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಈ ವರ್ಷ ಸೆ.08ರ ವರೆಗೆ 5 ಸಾವಿರ ಡೆಂಗ್ಯೂ ಪ್ರಕರಣ ವರದಿಯಾಗಿವೆ. ಆಗಸ್ಟ್ನಲ್ಲಿ 2,374 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದ್ದವು.