ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ

1 min read
Heavy rains

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ Heavy rains

ಬೆಂಗಳೂರು : ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದಲ್ಲಿ ಇಂದಿನಿಂದ ಮುಂದಿನ ಐದು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಏಪ್ರಿಲ್ 9 ರಿಂದ 13 ರವರೆಗೆ ರಾಜ್ಯದಲ್ಲಿ ಗುಡುಗು-ಮಿಂಚು ಸಹಿತ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ಕರಾವಳಿ, ಮಲೆನಾಡು ಭಾಗದಲ್ಲಿ ತೇವಾಂಶಭರಿತ ಮೋಡಗಳು ಸೃಷ್ಟಿಯಾಗಲಿವೆ.

Heavy rains

ಈ ಕಾರಣದಿಂದ ಕರಾವಳಿಯ ಉಡುಪಿ, ಉತ್ತರಕನ್ನಡ, ದಕ್ಷಿಣಕನ್ನಡ ಮತ್ತು ಮಲೆನಾಡು ಭಾಗದ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಇನ್ನು ಉಳಿದಂತೆ ಹಳೆ ಮೈಸೂರು ಭಾಗದ ಚಾಮರಾಜನಗರ, ರಾಮನಗರ, ಮೈಸೂರು ಭಾಗದಲ್ಲಿ 4 ದಿನ ವರ್ಷಧಾರೆ ಆಗಲಿದೆ.

ಮುಂಬೈ ಕರ್ನಾಟಕ ಭಾಗದ ಬೆಳಗಾವಿ, ಧಾರವಾಡ, ಕಲ್ಬುರ್ಗಿಯಲ್ಲಿ ಇಂದು ಮಳೆ ಬೀಳಲಿದೆ ಎಂದು ಹೇಳಲಾಗುತ್ತಿದೆ.

parking
ಜಾಹೀರಾತು

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd