ಚಿತ್ರದುರ್ಗ: ಪರೀಕ್ಷಾ ಕೊಠಡಿ ಮೇಲ್ವಿಚಾರಕ ಕರ್ತವ್ಯ ಲೋಪ ಮಾಡಿದ ಆರೋಪದ ಹಿನ್ನೆಲೆಯಲ್ಲಿ ನಾಲ್ವರು ಶಿಕ್ಷಕರನ್ನು ಅಮಾನತು ಮಾಡಿರುವ ಘಟನೆ ನಡೆದಿದೆ.
ಅಮಾನತುಗೊಂಡ ಶಿಕ್ಷಕರ ಮೇಲೆ ವಿದ್ಯಾರ್ಥಿಗಳು ನಕಲು ಮಾಡುತ್ತಿದ್ದರೂ ತಡೆಯದೆ ಸಹಕಾರ ನೀಡಿದ ಆರೋಪ ಕೇಳಿ ಬಂದಿದೆ. ಹೀಗಾಗಿ ಚಳ್ಳಕೆರೆಯ ಮಂಜರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕ ರೇವಣ್ಣ, ಚಳ್ಳಕೆರೆ ತಾಲೂಕಿನ ಗೋಸಿಕೆರೆ ಪ್ರೌಢ ಶಾಲೆಯ ಶಿಕ್ಷಕ ರಾಘವೇಂದ್ರ, ಪಿ.ಓಬನಹಳ್ಳಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕ ಚಂದ್ರಶೇಖರ್ ಹಾಗೂ ಕೊರ್ಲಕುಂಟೆ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕ ಪ್ರಕಾಶ್ ಎಂಬುವವರನ್ನು ಅಮಾನತುಗೊಳಿಸಲಾಗಿದೆ ಎಂದು ಚಿತ್ರದುರ್ಗ ಡಿಡಿಪಿಐ ರವಿಶಂಕರ ರೆಡ್ಡಿ ಆದೇಶಿಸಿದ್ದಾರೆ.