ಧಾರವಾಡ: ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ವಿರುದ್ಧ ವ್ಯಕ್ತಿಯೊಬ್ಬ ಅವಹೇಳನಾಕಾರಿ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ಆಕ್ರೋಶಗೊಂಡ ಯುವಕರ ಗುಂಪು ಧಾರ್ಮಿಕ ಕಟ್ಟಡ ಹಾನಿ ಮಾಡಿರುವ ಘಟನೆ ನಡೆದಿದೆ.
ಈ ಘಟನೆ ಜಿಲ್ಲೆಯ ತಡಕೋಡ ಗ್ರಾಮದಲ್ಲಿ ನಡೆದಿದೆ. ಅಲ್ಲದೇ, ಯುವಕರ ಗುಂಪು, ಆ ಯುವಕನ ಮನೆಗೆ ನುಗ್ಗಲು ಯತ್ನಿಸಿದ್ದು, ಪೊಲೀಸರು ಅನಾಹುತ ತಪ್ಪಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಅವಹೇಳನಾಕಾರಿ ಪೋಸ್ಟ್ ಹಾಕಿದ್ದಕ್ಕೆ ಸದ್ದಾಂ ಹುಸೇನ್ (20) ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು.
ಈ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಕೋಮುಗಲಭೆಗೆ ಕಾರಣವಾಗಿದ್ದು, ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಕಟ್ಟಡಕ್ಕೆ ಹಾನಿ ಮಾಡಿದ ಯುವಕರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಮೊಬೈಲ್‌ನಲ್ಲಿ ಅವಹೇಳನಕಾರಿ ಚಿತ್ರ ಹಾಕಿದ ಸದ್ದಾಂ ಹುಸೇನ್‌ನನ್ನು ಬಂಧಿಸಲಾಗಿದೆ.