ನಟಿ ತ್ರಿಷಾ ವಿರುದ್ಧ ಕೀಳು ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ತಮಿಳು (Tamil) ಚಿತ್ರೋದ್ಯಮದ ನಟ ಮನ್ಸೂರ್ ಅಲಿ ಖಾನ್ (Mansoor Ali Khan) ವಿರುದ್ಧ ತಮಿಳುನಾಡು ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.
ಲಿಯೋ ಸಿನಿಮಾದಲ್ಲಿ ನಾಯಕಿ ತ್ರಿಷಾ ಅವರನ್ನು ರೇಪ್ ಮಾಡುವ ಸನ್ನಿವೇಶ ಇದೆ ಅಂದುಕೊಂಡಿದ್ದೆ. ಆದರೆ, ಅದರಲ್ಲಿ ಇರಲಿಲ್ಲ. ಇದ್ದರೆ ಅನಾಮತ್ತಾಗಿ ಎತ್ತಿಕೊಂಡು ಹೋಗಿ ಬೆಡ್ ಮೇಲೆ ಬೀಸಾಕುತ್ತಿದ್ದೆ. ಹಿಂದೆ ಖುಷ್ಬೂ ಸೇರಿದಂತೆ ಹಲವರನ್ನು ಹಾಗೆಯೇ ಮಾಡಿದ್ದೆ ಎಂದು ಕೀಳು ಹೇಳಿಕೆ ನೀಡಿದ್ದರು.
ಹೇಳಿಕೆಯ ನಂತರ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಈ ಹೇಳಿಕೆಯನ್ನು ತ್ರಿಷಾ ಸೇರಿದಂತೆ ಹಲವರು ಖಂಡಿಸಿದ್ದರು. ಲಿಯೋ ಸಿನಿಮಾದ ನಿರ್ದೇಶಕರು ಕೂಡ ಅಸಮಾಧಾನ ವ್ಯಕ್ತ ಪಡಿಸಿದ್ದರು. ಮತ್ತೆ ಆತನೊಂದಿಗೆ ನಾನು ನಟಿಸುವುದಿಲ್ಲ ಎಂದು ತ್ರಿಷಾ ಹೇಳಿಕೊಂಡಿದ್ದರು. ಇದರ ಬೆನ್ನಲ್ಲಿಯೇ ಖುಷ್ಬೂ ಕೂಡ ಆಕ್ರೋಶ ವ್ಯಕ್ತಪಡಿಸಿದ್ದರು. ಮನ್ಸೂರ್ ಅಲಿ ಖಾನ್ ನಂತಹ ಕೊಳಕು ಮನಸ್ಥಿತಿಯವರಿಗೆ ಕಾನೂನು ಮೂಲಕ ಪಾಠ ಕಲಿಸಬೇಕು. ಇಲ್ಲದಿದ್ದರೆ ಇಂತಹ ಗಂಡಸರ ಸಂಖ್ಯೆ ಹೆಚ್ಚಾಗಬಹುದು. ಇವರಿಗೆ ಕಾನೂನು ಮೂಲಕ ಉತ್ತರ ನೀಡುತ್ತೇವೆ ಎದು ಹೇಳಿದ್ದರು. ಆದರೆ, ನಟ ಮಾತ್ರ ಇದಕ್ಕೆ ಕ್ಷಮೆ ಕೇಳಿರಲಿಲ್ಲ. ನಂತರ ಈ ವಿಷಯದಲ್ಲಿ ಮಹಿಳಾ ಆಯೋಗ ಮಧ್ಯೆ ಪ್ರವೇಶಿಸಿ ದೂರು ದಾಖಲಿಸಲು ಪೊಲೀಸರಿಗೆ ತಿಳಿಸಿತ್ತು. ಹೀಗಾಗಿ ನಟನ ವಿರುದ್ಧ ತಮಿಳುನಾಡು ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.