ದೇಶ್ ವಾಸಿಯೋ ಗಮನಿಸಿ | ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ
ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ಬೆಲೆ ಏರಿಕೆಯಾಗಿದೆ. ಇವತ್ತು ಪ್ರತಿ ಲೀಟರ್ ಪೆಟ್ರೋಲ್ ಮೇಲೆ 29 ಪೈಸೆ ಹಾಗೂ ಪ್ರತಿ ಲೀಟರ್ ಡೀಸೆಲ್ ಮೇಲೆ 29 ಪೈಸೆ ಬೆಲೆ ಹೆಚ್ಚಳವಾಗಿದೆ.
ದೇಶದಲ್ಲಿ ಕೊರೊನಾ ಅಬ್ಬರ.. ಲಾಕ್ ಡೌನ್ ನಿಂದಾಗಿ ಜನರು ಸಂಕಷ್ಟದಲ್ಲಿದ್ದಾರೆ.
ಇಂತಹ ಪರಿಸ್ಥಿತಿಯಲ್ಲಿ ಪದೇ ಪದೇ ಇಂಧನ ಬೆಲೆ ಏರಿಕೆಯಾಗುತ್ತಿರುವುದು ಗಾಯದ ಮೇಲೆ ಬರೆ ಎಳೆದಂತಾಗುತ್ತಿದೆ.
ಇನ್ನು ಇಂದಿನ ಬೆಲೆ ಏರಿಕೆಯೊಂದಿಗೆ ಬೆಂಗಳೂರಿನಲ್ಲಿ ಪೆಟ್ರೋಲ್ 99.05 ರೂ., ಡೀಸೆಲ್ 91.97 ರೂಪಾಯಿಗೆ ಏರಿಕೆಯಾಗಿದೆ.
ದೆಹಲಿಯಲ್ಲಿ ಪೆಟ್ರೋಲ್ 95.85 ರೂ., ಡೀಸೆಲ್ 86.75 ರೂ. ದಾಖಲಾಗಿದೆ. ಮುಂಬೈನಲ್ಲಿ ಪೆಟ್ರೋಲ್ 102.04 ರೂ., ಡೀಸೆಲ್ 94.15 ರೂ.,
ಪಾಟ್ನಾದಲ್ಲಿ ಪೆಟ್ರೋಲ್ 97.95 ರೂ., ಡೀಸೆಲ್ 92.05 ರೂ. , ಚೆನ್ನೈನಲ್ಲಿ ಪೆಟ್ರೋಲ್ 97.19 ರೂ., ಡೀಸೆಲ್ 91.42 ರೂ ಆಗಿದೆ.
ಕರ್ನಾಟಕ, ರಾಜಸ್ಥಾನ, ಮಹಾರಾಷ್ಟ್ರ ಸೇರಿ ಭಾರತದ 7 ರಾಜ್ಯಗಳಲ್ಲಿ ಲೀಟರ್ ಪೆಟ್ರೋಲ್ ಬೆಲೆ 100 ರೂ. ಗಡಿ ದಾಟಿದೆ.
ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಪೆಟ್ರೋಲ್ ಶತಕ ದಾಟಿದೆ.