ಬೆಂಗಳೂರು : ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಹಾಗೂ ಕೊರೊನಾ ಸಾಮಗ್ರಿ ಖರೀದಿಯಲ್ಲಿ ಅವ್ಯವಹಾರ, ರಾಜಸ್ಥಾನದ ರಾಜಕೀಯ ಬಿಕ್ಕಟ್ಟನ್ನು ಖಂಡಿಸಿ ನಗರದ ರಾಜಭವನದ ಬಳಿ ಕಾಂಗ್ರೆಸ್ ನಾಯಕರು ಧರಣಿ ನಡೆಸಲು ಮುಂದಾಗಿದ್ದು, ಮಾರ್ಗ ಮಧ್ಯೆಯೇ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ನೇತೃತ್ವದಲ್ಲಿ ಕೆಪಿಸಿಸಿ ಕಚೇರಿಯಿಂದ ರಾಜಭವನದವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಅದರಂತೆ ಕಾಂಗ್ರೆಸ್ ನಾಯಕರು, ಕೊರೊನಾ ಕಿಟ್ ಖರೀದಿ ಹಗರಣವನ್ನು ನ್ಯಾಯಾಂಗ ತನಿಖೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ.
ಆದ್ರೆ ಕಾಂಗ್ರೆಸ್ ನಾಯಕರನ್ನು ಪೊಲೀಸರು ಇಂಡಿಯನ್ ಎಕ್ಸ್ಪ್ರೆಸ್ ಬಳಿ ಬ್ಯಾರಿಕೇಡ್ ಹಾಕಿ ತಡೆದಿದ್ದು, ಡಿಕೆಶಿ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರನ್ನು ವಶಕ್ಕೆ ಪಡೆದಿದ್ದಾರೆ.








