Devanahalli : ಮಾಜಿ ಶಾಸಕ, ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ವೆಂಕಟಸ್ವಾಮಿಗೆ ಹೃದಯಾಘಾತ….
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಮಾಜಿ ಶಾಸಕ ವೆಂಕಟಸ್ವಾಮಿ ಅವರಿಗೆ ಹೃದಯಾಘಾತವಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ದೇವನಹಳ್ಳಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿರುವ ಮಾಜಿ ಶಾಸಕ ವೆಂಕಟಸ್ವಾಮಿ ಪ್ರಚಾರ ಮುಗಿಸಿ ಮನೆಗೆ ಬಂದಾಗ ನಿನ್ನೆ (ಮಾ.21) ಹೃದಯಾಘಾತಕ್ಕೆ ಒಳಗಾಗಿದ್ದಾರೆ.
2008ರಲ್ಲಿ ಕಾಂಗ್ರೆಸ್ ಪಕ್ಷದಿಂದ ಶಾಸಕನಾಗಿ ಆಯ್ಕೆಯಾಗಿದ್ದ ಮಾಜಿ ಶಾಸಕ ವೆಂಕಟಸ್ವಾಮಿ 2018 ರಲ್ಲಿ ಸೋಲನ್ನ ಅನುಭವಿಸಿದ್ದರು. ಈ ಬಾರಿ ಶತಯಾ ಗತಾಯ ಗೆಲುವಿಗಾಗಿ ಕಾಂಗ್ರೆಸ್ ಪಕ್ಷದ ಆಕಾಂಕ್ಷಿಯಾಗಿ ಟಿಕೆಟ್ ಗಾಗಿ ಸಾಕಷ್ಟು ಕಸರತ್ತು ನಡೆಸುತ್ತಿದ್ದಾರೆ.
ವೆಂಕಟಸ್ವಾಮಿ ಬೆಂಗಳೂರಿನ ಆಸ್ವತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಯಾವುದೇ ಅಪಾಯವಿಲ್ಲ ಎಂದು ವೈದ್ಯರು ಹೇಳಿದ್ದು, ಸ್ಟಂಟ್ ಹಾಕಿಕೊಳ್ಳುವಂತೆ ಸಲಹೆ ನೀಡಿದ್ದಾರೆ.
Devanahalli : Former MLA, Congress ticket aspirant Venkataswamy suffered a heart attack….