ದೇಶದ ಸುಸ್ಥಿರ ಅಭಿವೃದ್ಧಿ ಗುರಿ ಸೂಚ್ಯಂಕದಲ್ಲಿ ಈ ರಾಜ್ಯವೇ ನಂಬರ್ 1 , ಅತ್ಯಂತ ಕೆಟ್ಟ ಸ್ತಾನ ಯಾವ ರಾಜ್ಯಕ್ಕೆ
2020-21ನೇ ಸಾಲಿನ ಸುಸ್ಥಿರ ಅಭಿವೃದ್ಧಿ ಗುರಿ (ಎಸ್‌ಡಿಜಿ) ಭಾರತ ಸೂಚ್ಯಂಕ ಪಟ್ಟಿ ರಿಲೀಸ್ ಆಗಿದೆ. ನೀತಿ ಆಯೋಗ ಬಿಡುಗಡೆ ಮಾಡಿರುವ ಈ ಪಟ್ಟಿಯಲ್ಲಿ ಕೇರಳ ಮೊದಲನೇ ಸ್ಥಾನದಲ್ಲಿದೆ.
ಬಿಹಾರ ಅತ್ಯಂತ ಕೆಟ್ಟ ಪ್ರದರ್ಶನ ನೀಡಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಸಾಮಾಜಿಕ, ಆರ್ಥಿಕ ಹಾಗೂ ಪರಿಸರ ಮಾನದಂಡಗಳಲ್ಲಿ ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಪ್ರಗತಿಯನ್ನು ಸುಸ್ಥಿರ ಅಭಿವೃದ್ಧಿ ಗುರಿ (ಎಸ್‌ಡಿಜಿ) ಮೌಲ್ಯಮೌಪನ ಮಾಡುತ್ತದೆ.
75 ಅಂಕಗಳೊಂದಿಗೆ ಕೇರಳ ಮೊದಲನೇ ಸ್ಥಾನದಲ್ಲಿದೆ.
ಹಿಮಾಚಲ ಪ್ರದೇಶ ಹಾಗೂ ತಮಿಳುನಾಡು ತಲಾ 74 ಅಂಕಗಳೊಂದಿಗೆ 2ನೇ ಸ್ಥಾನವನ್ನು ಹಂಚಿಕೊಂಡಿವೆ.
ಬಿಹಾರ, ಜಾರ್ಖಂಡ್ ಮತ್ತು ಅಸ್ಸಾಂ ಅತ್ಯಂತ ಕೆಟ್ಟ ಪ್ರದರ್ಶನ ನೀಡಿದ ರಾಜ್ಯಗಳಾಗಿವೆ. ಕೇಂದ್ರಾಡಳಿತ ಪ್ರದೇಶಗಳ ಪೈಕಿ ಚಂಡೀಗಡ 79 ಅಂಕಗಳೊಂದಿಗೆ ಅಗ್ರಸ್ಥಾನ ಕಾಯ್ದುಕೊಂಡಿದ್ದು, ದೆಹಲಿ (68) 2ಡನೇ ಸ್ಥಾನದಲ್ಲಿದೆ.
ಈ ದೇಶದಲ್ಲಿ ಸಿಗುತ್ತೆ 7 KG ತೂಕದ ಹೂ… ಕರೆನ್ಸಿಯಲ್ಲಿದೆ ಗಣೇಶನ ಚಿತ್ರ…. ಇಂಡೋನೇಷ್ಯಾದ ಇಂಟರೆಸ್ಟಿಂಗ್ ಫ್ಯಾಕ್ಟ್ಸ್..!
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.