ಬಳ್ಳಾರಿ : ಮುಖ್ಯಮಂತ್ರಿ ಆಗಿ ಯಡಿಯೂರಪ್ಪ ಅವರು ಮುಂದುವರೆದರೆ ಮಾತ್ರ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಯಾಗಲು ಸಾಧ್ಯ ಎಂದು ಶಾಸಕ ಗಾಲಿ ಸೋಮಶೇಖರ್ ರೆಡ್ಡಿ ಅವರು ಹೇಳಿದ್ದಾರೆ.
ಇಂದು ಬಳ್ಳಾರಿಯಲ್ಲಿ ನೂತನ ತರಕಾರಿ ಮಾರುಕಟ್ಟೆಗೆ ಶಾಸಕ ಸೋಮಶೇಖರ್ ರೆಡ್ಡಿ ಅವರು ಚಾಲನೆ ನೀಡಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡುತ್ತ ಪಕ್ಷದಲ್ಲಿನ ಅಸಮಾಧಾನದ ಬಗ್ಗೆ ಮಾತನಾಡಿದ ಶಾಸಕರು, ಬೆಂಗಳೂರಲ್ಲಿ ಏನು ನಡಿಯುತ್ತೆ ಅನ್ನೋದು ನನಗೆ ಗೊತ್ತಿಲ್ಲ. ನಾನು ಬಹಳ ದಿನಗಳಾಯಿತು ಬೆಂಗಳೂರಿಗೆ ಹೋಗಿಲ್ಲ. ಹೈಕಮಾಂಡ್ ನಲ್ಲಿ ಏನು ಚರ್ಚೆ ನಡೆಯುತ್ತೆ ಎಂದು ಕೂಡಾ ನನಗೆ ತಿಳಿದಿಲ್ಲ ಎಂದರು.
ಇದೇ ವೇಳೆ ಉತ್ತರ ಕರ್ನಾಟಕ ಭಾಗದವರನ್ನ ಸಿಎಂ ಆಗಿ ನೇಮಕ ಮಾಡುವ ವಿಚಾರ ಬಗ್ಗೆ ಪ್ರತಿಕ್ರಿಯಿಸಿದ ಸೋಮಶೇಖರ್, ಮುಖ್ಯಮಂತ್ರಿ ಆಗಿ ಯಡಿಯೂರಪ್ಪ ಅವರು ಮುಂದುವರೆದರೆ ಮಾತ್ರ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಯಾಗಲು ಸಾಧ್ಯ ಎಂದರು.