ADVERTISEMENT
Thursday, November 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಡಿ.4 ರಂದು ತೆರೆಗೆ ಬರಲಿದೆ ‘ದೇವಿ ಮಹಾತ್ಮೆ’: ಹೊಂಬಾಳೆ ಮ್ಯೂಸಿಕ್ ಬೆನ್ನಲ್ಲೇ ಕೆಆರ್‌ಜಿ ಸ್ಟುಡಿಯೋಸ್ ಸಾಥ್!

admin by admin
November 19, 2026
in Cinema, Newsbeat, ಮನರಂಜನೆ
devi-mahatme-movie-december-4-release-krg-studios-hombale-music

devi-mahatme-movie-december-4-release-krg-studios-hombale-music

Share on FacebookShare on TwitterShare on WhatsappShare on Telegram

​ಬೆಂಗಳೂರು: ನಟ ರಂಗಾಯಣ ರಘು ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ‘ದೇವಿ ಮಹಾತ್ಮೆ’ ಚಿತ್ರವು ಡಿಸೆಂಬರ್ 4 ರಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ. ಈ ಚಿತ್ರಕ್ಕೆ ಸ್ಯಾಂಡಲ್‌ವುಡ್‌ನ ಎರಡು ಪ್ರತಿಷ್ಠಿತ ಸಂಸ್ಥೆಗಳ ಬೆಂಬಲ ಸಿಕ್ಕಿರುವುದು ವಿಶೇಷವಾಗಿದೆ.

​ಮೊದಲಿಗೆ ಈ ಚಿತ್ರದ ಆಡಿಯೋ ಹಕ್ಕುಗಳನ್ನು ಪ್ರತಿಷ್ಠಿತ ‘ಹೊಂಬಾಳೆ ಮ್ಯೂಸಿಕ್’ ಸಂಸ್ಥೆ ಪಡೆದುಕೊಂಡಿತ್ತು. ಇತ್ತೀಚೆಗಷ್ಟೇ ಹೊಂಬಾಳೆ ಮ್ಯೂಸಿಕ್ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಯಾದ ‘ಎದೆ ಸುಡುತಿದೆ ಗಾಯ…’ ಹಾಡು ಸಿನಿಪ್ರಿಯರ ಮನಗೆಲ್ಲುವಲ್ಲಿ ಯಶಸ್ವಿಯಾಗಿದೆ. ಇದೀಗ ಮತ್ತೊಂದು ಪ್ರತಿಷ್ಠಿತ ಸಂಸ್ಥೆಯಾದ ‘ಕೆಆರ್‌ಜಿ ಸ್ಟುಡಿಯೋಸ್’ ಈ ಚಿತ್ರದ ವಿತರಣೆಯ ಜವಾಬ್ದಾರಿಯನ್ನು ಹೊತ್ತುಕೊಂಡಿದೆ.

Related posts

kadri-movie-shamanth-bro-gowda-m-anand-raj-folklore-horror

ಬೆಳ್ಳಿತೆರೆಗೆ ‘ಬ್ರೋ ಗೌಡ’ ಎಂಟ್ರಿ: ಎಂ. ಆನಂದ್ ರಾಜ್ ನಿರ್ದೇಶನದ ‘ಕದ್ರಿ’ ಚಿತ್ರದಲ್ಲಿ ಹೀರೋ

November 19, 2026
lakshmiputra-trailer-release-chikkanna-shivarajkumar-ap-arjun lakshmiputra-trailer-release-chikkanna-shivarajkumar-ap-arjun

ಎ.ಪಿ. ಅರ್ಜುನ್‌ ನಿರ್ಮಾಣದ ‘ಲಕ್ಷ್ಮೀಪುತ್ರ’ ಟ್ರೇಲರ್ ರಿಲೀಸ್: ಚಿಕ್ಕಣ್ಣನ ಡ್ಯಾನ್ಸ್-ನಟನೆಗೆ ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್ ಫಿದಾ

November 19, 2026

​ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಕೆಆರ್‌ಜಿ ಸ್ಟುಡಿಯೋಸ್‌ನ ಕಾರ್ತಿಕ್ ಗೌಡ ಅವರು, “ನಮ್ಮ ಪ್ರೀತಿಯ ಸಹೋದರ ನಾಗರಾಜ ಸೋಮಯಾಜಿ ನಿರ್ದೇಶನದ ‘ದೇವಿ ಮಹಾತ್ಮೆ’ ಚಿತ್ರವನ್ನು ಕೆಆರ್‌ಜಿ ಸ್ಟುಡಿಯೋಸ್ ವತಿಯಿಂದ ಜಾಗತಿಕವಾಗಿ ಬಿಡುಗಡೆ ಮಾಡಲಾಗುತ್ತಿದೆ. ಡಿಸೆಂಬರ್ 4 ರಿಂದ ಸಿನಿಮಾ ಚಿತ್ರಮಂದಿರಗಳಲ್ಲಿ ಪ್ರದರ್ಶನಗೊಳ್ಳಲಿದೆ” ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

​ನಾಗರಾಜ ಸೋಮಯಾಜಿ ನಿರ್ದೇಶನದ ಈ ಚಿತ್ರಕ್ಕೆ ‘ಯುವಿಜಿ ಸ್ಟುಡಿಯೋ’ ಬ್ಯಾನರ್‌ನಡಿಯಲ್ಲಿ ವಿದ್ಯಾ ಗಾಂಧಿರಾಜನ್ ಬಂಡವಾಳ ಹೂಡಿದ್ದು, ಗಾಂಧಿರಾಜನ್ ನಿರ್ಮಾಣದಲ್ಲಿ ಸಾಥ್ ನೀಡಿದ್ದಾರೆ. ಹೊಂಬಾಳೆ ಮ್ಯೂಸಿಕ್ ಹಾಗೂ ಕೆಆರ್‌ಜಿ ಸ್ಟುಡಿಯೋಸ್‌ನಂತಹ ದೊಡ್ಡ ಸಂಸ್ಥೆಗಳ ಬೆಂಬಲದೊಂದಿಗೆ, ವಿಭಿನ್ನ ಕಥಾಹಂದರ ಹೊಂದಿರುವ ‘ದೇವಿ ಮಹಾತ್ಮೆ’ ಡಿಸೆಂಬರ್ 4 ರಂದು ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ.

ShareTweetSendShare
Join us on:

Related Posts

kadri-movie-shamanth-bro-gowda-m-anand-raj-folklore-horror

ಬೆಳ್ಳಿತೆರೆಗೆ ‘ಬ್ರೋ ಗೌಡ’ ಎಂಟ್ರಿ: ಎಂ. ಆನಂದ್ ರಾಜ್ ನಿರ್ದೇಶನದ ‘ಕದ್ರಿ’ ಚಿತ್ರದಲ್ಲಿ ಹೀರೋ

by admin
November 19, 2026
0

ಬೆಂಗಳೂರು: ‘ಬಿಗ್ ಬಾಸ್ ಕನ್ನಡ ಸೀಸನ್ 8’ರ ಮೂಲಕ ಕನ್ನಡಿಗರ ಮನೆಮಾತಾಗಿ, ಬಳಿಕ ‘ಲಕ್ಷ್ಮೀ ಬಾರಮ್ಮ’,ʻಅಗ್ನಿಸಾಕ್ಷಿʼ ಧಾರಾವಾಹಿಗಳ ಮೂಲಕ ಕಿರುತೆರೆ ವೀಕ್ಷಕರ ಮನಗೆದ್ದಿರುವ ನಟ ಶಮಂತ್ ಬ್ರೋ...

lakshmiputra-trailer-release-chikkanna-shivarajkumar-ap-arjun lakshmiputra-trailer-release-chikkanna-shivarajkumar-ap-arjun

ಎ.ಪಿ. ಅರ್ಜುನ್‌ ನಿರ್ಮಾಣದ ‘ಲಕ್ಷ್ಮೀಪುತ್ರ’ ಟ್ರೇಲರ್ ರಿಲೀಸ್: ಚಿಕ್ಕಣ್ಣನ ಡ್ಯಾನ್ಸ್-ನಟನೆಗೆ ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್ ಫಿದಾ

by admin
November 19, 2026
0

ಬೆಂಗಳೂರು: ಎ.ಪಿ. ಅರ್ಜುನ್ ಸಾರಥ್ಯದಲ್ಲಿ ಮೂಡಿಬಂದಿರುವ 'ಲಕ್ಷ್ಮೀಪುತ್ರ' ಚಿತ್ರವನ್ನು ಅನ್ನಪೂರ್ಣ ಎ.ಪಿ. ಅರ್ಜುನ್ ನಿರ್ಮಾಣ ಮಾಡಿದ್ದು, ರವಿಕುಮಾರ್ ಅವರು ಸಹ ನಿರ್ಮಾಪಕರಾಗಿದ್ದಾರೆ. ​ಎ.ಪಿ. ಅರ್ಜುನ್ ಕಥೆ, ಚಿತ್ರಕಥೆ,...

parak-movie-poster-childrens-day-davanagere-students-sriimurali-halesh-kogundi

ಮಕ್ಕಳ ದಿನಾಚರಣೆಯಂದು ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ‘ಪರಾಕ್’ ಚಿತ್ರದ ಪೋಸ್ಟರ್ ಬಿಡಿಸಿದ ದಾವಣಗೆರೆ ವಿದ್ಯಾರ್ಥಿಗಳು; ನಿರ್ದೇಶಕ ಹಾಲೇಶ್ ಕೋಗುಂಡಿಗೆ ವಿಶೇಷ ಗೌರವ

by admin
November 19, 2026
0

  ದಾವಣಗೆರೆ: ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ಪರಾಕ್’ ಬಿಡುಗಡೆಗೂ ಮುನ್ನವೇ ಸ್ಯಾಂಡಲ್‌ವುಡ್‌ನಲ್ಲಿ ಭರ್ಜರಿ ಸದ್ದು ಮಾಡುತ್ತಿದೆ. ಇದೀಗ ಮಕ್ಕಳ ದಿನಾಚರಣೆಯ ವಿಶೇಷ ಸಂದರ್ಭದಲ್ಲಿ...

sathya-son-of-harishchandra-ga-garaga-song-release-niroop-bhandari-kailash-kher

ನಿರೂಪ್ ಭಂಡಾರಿ ಅಭಿನಯದ ‘ಸತ್ಯ ಸನ್ ಆಫ್ ಹರಿಶ್ಚಂದ್ರ’ ಚಿತ್ರದ ‘ಗಾ ಗರಗ’ ಹಾಡು ಬಿಡುಗಡೆ: ಕೈಲಾಶ್ ಖೇರ್ ಧ್ವನಿ ಹಾಗೂ ಸಚಿನ್ ಬಸ್ರೂರ್ ಸಂಗೀತದ ಮೋಡಿ

by admin
November 19, 2026
0

ಬೆಂಗಳೂರು: ನಟ ನಿರೂಪ್ ಭಂಡಾರಿ ಮುಖ್ಯಭೂಮಿಕೆಯಲ್ಲಿ ನಟಿಸಿರುವ ಬಹುನಿರೀಕ್ಷಿತ ‘ಸತ್ಯ ಸನ್ ಆಫ್ ಹರಿಶ್ಚಂದ್ರ’ ಚಿತ್ರದ ‘ಗಾ ಗರಗ’ ಎಂಬ ಭಾವನಾತ್ಮಕ ಹಾಗೂ ಅರ್ಥಪೂರ್ಣ ಗೀತೆ ಅಧಿಕೃತವಾಗಿ...

anna-from-mexico-hogona-bara-mexico-lyrical-song-dolly-dhananjay

ಡಾಲಿʼ ಧನಂಜಯ್ ‘ಅಣ್ಣ ಫ್ರಂ ಮೆಕ್ಸಿಕೋ’ ಚಿತ್ರದ ‘ಹೋಗೋಣ ಬಾರಾ ಮೆಕ್ಸಿಕೋ’ ಲಿರಿಕಲ್ ಸಾಂಗ್ ರಿಲೀಸ್: ಯೋಗರಾಜ್ ಭಟ್ ಸಾಹಿತ್ಯಕ್ಕೆ ಭರ್ಜರಿ ರೆಸ್ಪಾನ್ಸ್

by admin
November 19, 2026
0

ಬೆಂಗಳೂರು: ಡಾಲಿ ಧನಂಜಯ್ ಅಭಿನಯದ ಬಹುನಿರೀಕ್ಷಿತ 'ಅಣ್ಣ ಫ್ರಂ ಮೆಕ್ಸಿಕೋ' ಸಿನಿಮಾ ಇದೇ ಡಿಸೆಂಬರ್ 24ರಂದು ಅದ್ಧೂರಿಯಾಗಿ ತೆರೆಗೆ ಬರಲು ಸಜ್ಜಾಗಿದ್ದು, ಚಿತ್ರತಂಡ ಪ್ರಚಾರದ ಭರಾಟೆಯನ್ನು ಜೋರಾಗಿಸಿದೆ....

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram