ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹಾಗೂ ಸಾವನ್ನಪ್ಪುತ್ತಿರುವ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1565ಕ್ಕೆ ಏರಿಕೆಯಾಗಿದ್ದು, ಈವರೆಗೆ 10 ಮಂದಿ ಬಲಿಯಾಗಿದ್ದಾರೆ. ಶ್ರೀರಂಗಪಟ್ಟಣ ತಾಲೂಕಿನಲ್ಲೂ ಕೊರೊನಾ ಸೊಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಸಿದ್ಧ ನಿಮಿಷಾಂಭ ದೇಗುಲದ ಹುಣ್ಣಿಮೆ ಪೂಜೆಗೆ ಭಕ್ತರಿಗೆ ನಿರ್ಬಂಧ ಹೇರಲಾಗಿದೆ.
ಶ್ರೀರಂಗಪಟ್ಟಣದ ಗಂಜಾಮ್‍ನಲ್ಲಿರುವ ಪ್ರಸಿದ್ದ ನಿಮಿಷಾಂಭ ದೇಗುಲದಲ್ಲಿ ಪ್ರತಿ ಹುಣ್ಣಿಮೆ ಪೂಜೆಗೆ ಬೆಂಗಳೂರು, ಮೈಸೂರು ಸೇರಿದಂತೆ ಸುತ್ತಮುತ್ತಲಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಬರುತ್ತಾರೆ.
ಹುಣ್ಣಿಮೆ ಪೂಜೆಗೆ ಹೆಚ್ಚಿನ ಭಕ್ತರು ಸೇರುವ ಹಿನ್ನೆಲೆಯಲ್ಲಿ ಪ್ರವೇಶ ನಿರ್ಬಂಧಿಸಿ ಶ್ರೀರಂಗಪಟ್ಟಣ ತಹಸೀಲ್ದಾರ್ ರೂಪ ಆದೇಶ ಹೊರಡಿಸಿದ್ದಾರೆ.