ಕೊರೊನಾ ಹಾವಳಿಗೆ ತತ್ತರಿಸಿಹೋಗಿರುವ ದಕ್ಷಿಣ ಕನ್ನಡದಲ್ಲಿ ಈ ಬಾರಿ ಪ್ರಸಿದ್ಧ ನಾಗಪಂಚಮಿ ಆಚರಣೆಗೆ ತಡೆ ಹೇರಲಾಗಿದೆ. ಅದರಂತೆ ಎಲ್ಲಾ ನಾಗಾರಾಧನೆ ಸ್ಥಳಗಳಲ್ಲಿ ಸಾರ್ವಜನಿಕ ನಾಗಪಂಚಮಿ ಆಚರಣೆಗೆ ನಿರ್ಬಂಧ ಹೇರಲಾಗಿದೆ. ಇದರ ಬೆನ್ನಲ್ಲೇ ಮಂಗಳೂರಿನ ಇತಿಹಾಸ ಪ್ರಸಿದ್ಧ ಕುಡುಪು ದೇಗುಲಕ್ಕೆ ಭಕ್ತರ ಪ್ರವೇಶವನ್ನು ನಿಷೇಧಿಸಲಾಗಿದೆ. ಇದೇ ಜುಲೈ 25 ರಂದು ನಾಗಪಂಚಮಿಯಿದ್ದು, ಪ್ರತಿ ವರ್ಷ ಕುಡುಪು ದೇವಾಲಯದಲ್ಲಿ ಸಾವಿರಾರು ಭಕ್ತರು ಜಮಾವಣೆಗೊಂಡು ನಾಗನ ಆರಾಧನೆ ಮಾಡುತ್ತಿದ್ದರು. ಆದ್ರೆ ಈ ಬಾರಿ ಕೇವಲ ರಾಜ್ಯ ಅಷ್ಟೇ ಅಲ್ಲದೆ ಇಡೀ ವಿಶ್ವದ ಮೇಲೆ ಕೊರೊನಾ ಕರಿ ನೆರಳು ಆವರಿಸಿದೆ. ಸೋಂಕು ನಿರ್ಮೂಲನೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅನಿವಾರ್ಯತೆಯಾಗಿದೆ. ಹೀಗಾಗಿಯೇ ಕುಡುಪು ಸನ್ನಿಧಾನಕ್ಕೆ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ನಾಗಪಂಚಮಿ ದಿನದಂದು ದರ್ಶನ, ತೀರ್ಥ ಪ್ರಸಾದ, ಆರಾಧನೆ ಎಲ್ಲಕ್ಕೂ ಬ್ರೇಕ್ ಹಾಕಲಾಗಿದೆ. ಆದರೆ ಅರ್ಚಕರು ಹಾಗೂ ದೇಗುಲದ ಸಿಬ್ಬಂದಿ ಸರಳವಾಗಿ ಸಂಕೇತವಾಗಿ ದೇವರಿಗೆ ಪೂಜೆ ಸಲ್ಲಿಸಲಿದ್ದಾರೆ.
ಸಚಿವ ಸತೀಶ್ ಜಾರಕಿಹೊಳಿ ಸುತ್ತ ಇಡಿ ಚಕ್ರವ್ಯೂಹ: ದೆಹಲಿ ಮಟ್ಟಕ್ಕೆ ತಲುಪಿದ ತನಿಖೆಯ ಬಿಸಿ -ಸಚಿವ ಸ್ಥಾನಕ್ಕೆ ಕುತ್ತು ತರುತ್ತಾ ಕಮಿಷನ್ ಆರೋಪ
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಈಗ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ವಿರುದ್ಧದ ಇಡಿ ತನಿಖೆ ಅತಿ ದೊಡ್ಡ ಸಂಚಲನ ಮೂಡಿಸಿದೆ. ಇದು ಕೇವಲ ಬೆಂಗಳೂರು ಮಟ್ಟದ...








