ಬೆಂಗಳೂರಲ್ಲಿ ಪುಂಡರ ಪುಂಡಾಟ:
ಬೆಂಗಳೂರು : ಡಿ.ಜಿ.ಹಳ್ಳಿಯ ಗಲಭೆಗೆ ಸಂಬಂಧಿಸಿದಂತೆ ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯಿಸಿದ್ದು, ಇಂತಹ ಪ್ರಚೋದನೆ, ಪುಂಡಾಟಗಳನ್ನು ಸರ್ಕಾರ ಕಿಂಚಿತ್ತೂ ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಬಿಎಸ್ ವೈ, ಡಿ.ಜಿ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಿಡಿಗೇಡಿಗಳು ಶಾಸಕ ಅಖಂಡ ಶ್ರೀನಿವಾಸ ಅವರ ಮನೆ ಹಾಗೂ ಪೊಲೀಸ್ ಠಾಣೆ ಮೇಲೆ ದಾಳಿ, ಗಲಭೆ ನಡೆಸಿರುವುದು ಖಂಡನೀಯ. ಈಗಾಗಲೇ ದುಷ್ಕರ್ಮಿಗಳ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಲಾಗಿದ್ದು ಸರ್ಕಾರ ದಾಂಧಲೆ ಹತ್ತಿಕ್ಕಲು ಎಲ್ಲ ರೀತಿಯ ಕ್ರಮ ಕೈಗೊಂಡಿದೆ.
ನಿನ್ನೆ ರಾತ್ರಿ ನಡೆದ ಗಲಭೆಯಲ್ಲಿ ಪತ್ರಕರ್ತರು, ಪೊಲೀಸರು, ಸಾರ್ವಜನಿಕರ ಮೇಲೆ ಹಲ್ಲೆ ಮಾಡಿರುವುದು ಅಕ್ಷಮ್ಯ. ಇಂತಹ ಪ್ರಚೋದನೆ, ಪುಂಡಾಟಗಳನ್ನು ಸರ್ಕಾರ ಕಿಂಚಿತ್ತೂ ಸಹಿಸುವುದಿಲ್ಲ. ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ನಿಶ್ಚಿತ. ಜನರು ಈ ಸಂದರ್ಭದಲ್ಲಿ ಆವೇಶಕ್ಕೆ ಒಳಗಾಗದೆ ಸಂಯಮದಿಂದ ವರ್ತಿಸಬೇಕೆಂದು ಟ್ವಿಟ್ಟರ್ ನಲ್ಲಿ ಸಿಎಂ ಬಿಎಸ್ ವೈ ಮನವಿ ಮಾಡಿಕೊಂಡಿದ್ದಾರೆ.
ಡಿ.ಜಿ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಿಡಿಗೇಡಿಗಳು ಶಾಸಕ ಅಖಂಡ ಶ್ರೀನಿವಾಸ ಅವರ ಮನೆ ಹಾಗು ಪೋಲೀಸ್ ಠಾಣೆ ಮೇಲೆ ದಾಳಿ, ಗಲಭೆ ನಡೆಸಿರುವುದು ಖಂಡನೀಯ. ಈಗಾಗಲೇ ದುಷ್ಕರ್ಮಿಗಳ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಲಾಗಿದ್ದು ಸರ್ಕಾರ ದಾಂಧಲೆ ಹತ್ತಿಕ್ಕಲು ಎಲ್ಲ ರೀತಿಯ ಕ್ರಮ ಕೈಗೊಂಡಿದೆ. (1/2)
— B.S.Yediyurappa (@BSYBJP) August 12, 2020








