ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸಹಕಾರ ವಿಭಾಗದ ನೂತನ ರಾಜ್ಯಾಧ್ಯಕ್ಷರನ್ನಾಗಿ ಕಾಂಗ್ರೆಸ್ ಮುಖಂಡರಾದ ಧನರಾಜ್ ಎಸ್. ತಾಳಂಪಳ್ಳಿ ಅವರನ್ನು ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ಬೀದರ್ ಜಿಲ್ಲೆಯ ಬಸವಕಲ್ಯಾಣದ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರಾದ ಧನರಾಜ್ ತಾಳಂಪಳ್ಳಿ ಅವರು ಜಿಲ್ಲೆಯಲ್ಲಿ ಪಕ್ಷ ಸಂಘಟನೆಯಲ್ಲಿ ಸಕ್ರಿಯರಾಗಿದ್ದಾರೆ.
ಕಾಂಗ್ರೆಸ್ ನಾಯಕರಿಗೆ ಧನರಾಜ್ ತಾಳಂಪಳ್ಳಿ ಧನ್ಯವಾದ:
ಕೆಪಿಸಿಸಿ ಸಹಕಾರ ವಿಭಾಗದ ನೂತನ ರಾಜ್ಯಾಧ್ಯಕ್ಷರಾಗಿ ನೇಮಕವಾಗಿರುವ ಧನರಾಜ್ ಎಸ್. ತಾಳಂಪಳ್ಳಿ ಅವರು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಹಾಗೂ ರಾಜ್ಯ ನಾಯಕರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ʻʻನಿಷ್ಠಾವಂತ ಕಾರ್ಯಕರ್ತನಾಗಿ ನಾನು ಪಕ್ಷಕ್ಕೆ ಸಲ್ಲಿಸಿದ ಸೇವೆಯನ್ನು ಗುರುತಿಸಿ ಮತ್ತು ನನ್ನ ಮೇಲೆ ವಿಶ್ವಾಸವಿಟ್ಟು ನನಗೆ ಕೆಪಿಸಿಸಿ ಸಹಕಾರ ವಿಭಾಗದ ರಾಜ್ಯಾಧ್ಯಕ್ಷನ ಜವಾಬ್ದಾರಿಯನ್ನು ನೀಡಿರುವ ಎಐಸಿಸಿ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಸೋನಿಯಾ ಗಾಂಧಿ, ಲೋಕಸಭೆ ವಿರೋಧ ಪಕ್ಷದ ನಾಯಕರಾದ ಸನ್ಮಾನ್ಯ ಶ್ರೀ ರಾಹುಲ್ ಗಾಂಧಿ, ಕಾಂಗ್ರೆಸ್ ಸಂಸದರಾದ ಶ್ರೀಮತಿ ಪ್ರಿಯಾಂಕಾ ವಾದ್ರಾ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಕೆ.ಸಿ.ವೇಣುಗೋಪಾಲ್, ರಾಜ್ಯ ಕಾಂಗ್ರೆಸ್ ಉಸ್ತುವಾರಿಗಳಾದ ಶ್ರೀ ರಣದೀಪ್ ಸಿಂಗ್ ಸುರ್ಜೇವಾಲಾ,ಎಐಸಿಸಿ ಕಾರ್ಯದರ್ಶಿಗಳಾದ ಶ್ರೀ ಗೋಪಿನಾಥ ಪಳನಿಯಪ್ಪನ್, ಕೆಪಿಸಿಸಿ ಅಧ್ಯಕ್ಷರು ಮತ್ತು ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ.ಶಿವಕುಮಾರ್ ಹಾಗೂ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರಿಗೆ ಹೃದಯಪೂರ್ವಕ ಧನ್ಯವಾದಗಳು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.








