ಕಾಲಿವುಡ್ ಗೆ ಡಾ. ರಾಜ್ ಕುಮಾರ್ ಮೊಮ್ಮಗಳು?
ಬೆಂಗಳೂರು : ನಿನ್ನ ಸನಿಹಕೆ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಪಾದರ್ಪಣೆ ಮಾಡಿರುವ ವರನಟ ಡಾ. ರಾಜ್ ಕುಮಾರ್ರವರ ಮೊಮ್ಮಗಳು ಧನ್ಯಾ ರಾಮ್ ಕುಮಾರ್ ಕಾಲಿವುಡ್ ಗೆ ಎಂಟ್ರಿ ಕೊಡಲಿದ್ದಾರೆ ಎಂಬ ಮಾತುಗಳು ಗಾಂಧಿನಗರದ ಗಲ್ಲಿಗಳಲ್ಲಿ ಕೇಳಿಬರುತ್ತಿವೆ.
ಧನ್ಯಾ ರಾಮ್ ಕುಮಾರ್ ಅಭಿನಯದ ನಿನ್ನ ಸನಿಹಕೆ ಚಿತ್ರ ಆಗಸ್ಟ್ 20ರ ವರಮಹಾಲಕ್ಷ್ಮಿ ಹಬ್ಬದಂದು ಸಿನಿಮಾ ಬೆಳ್ಳಿ ಪರದೆ ಮೇಲೆ ಬರಲಿದೆ ಎಂದು ಚಿತ್ರತಂಡ ಹೇಳುತ್ತಿದೆ. ಈ ಚಿತ್ರದಲ್ಲಿ ನಟ ಸೂರಜ್ ಗೌಡ ನಾಯಕನಟನಾಗಿ ಕಾಣಿಸಿಕೊಂಡಿದ್ದಾರೆ.
ಈ ಮಧ್ಯೆ ಧನ್ಯಾ ರಾಮ್ ಕುಮಾರ್ ತಮಿಳು ಚಿತ್ರರಂಗಕ್ಕೆ ಹಾರಲಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ. ತಮಿಳು ಚಿತ್ರರಂಗದಿಂದ ಧನ್ಯಾ ಅವರಿಗೆ ಆಫರ್ ಬಂದಿದೆ ಎಂಬ ಸುದ್ದಿ ಹರಿದಾಡುತ್ತಿದ್ದು, ಕೆಲವು ತಮಿಳು ವೆಬ್ ಸೈಟ್ ಗಳಲ್ಲಿ ಸದ್ಯದಲ್ಲಿಯೇ ಧನ್ಯಾ ರಾಮ್ ಕುಮಾರ್ ತಮಿಳು ಸಿನಿಮಾವೊಂದಕ್ಕೆ ಬಣ್ಣ ಹಚ್ಚಲಿದ್ದಾರೆ ಎಂದು ವರದಿ ಮಾಡಿದೆ.
ಆದರೆ ಈ ಬಗ್ಗೆ ಧನ್ಯಾ ರಾಮ್ ಕುಮಾರ್ ಅವರಿಂದ ಅಧಿಕೃತವಾಗಿ ಯಾವುದೇ ಮಾಹಿತಿ ದೊರೆತಿಲ್ಲ.