ಧರ್ಮೇಗೌಡಯವರದ್ದು ರಾಜಕೀಯ ಕೊಲೆ : ಹೆಚ್.ಡಿ.ಕುಮಾರಸ್ವಾಮಿ ಕಣ್ಣೀರು
ಬೆಂಗಳೂರು : ವಿಧಾನ ಪರಿಷತ್ ನ ಉಪಸಭಾಪತಿ ಎಸ್.ಎಲ್.ಧರ್ಮೇಗೌಡ ಅವರು ಚಿಕ್ಕಮಗಳೂರು ಜಿಲ್ಲೆ ಗುಣಸಾಗರದಲ್ಲಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಘಟನೆ ರಾಜ್ಯ ರಾಜಕೀಯದಲ್ಲಿ ಸೂತಕದ ಛಾಯೆ ಮೂಡಿಸಿದೆ. ಈ ಘಟನೆ ರಾಜ್ಯ ರಾಜಕಾರಣಕ್ಕೆ ದೊಡ್ಡ ಕಪ್ಪು ಚುಕ್ಕೆ. ಧರ್ಮೇಗೌಡ ಅವರ ನಿಧನಕ್ಕೆ ಗಣ್ಯಾತಿಗಣ್ಯರು ಸಂತಾಪ ಸೂಚಿಸಿದ್ದಾರೆ.
ಈ ಬಗ್ಗೆ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿ ಸ್ನೇಹಿತನ ಸಾವಿಗೆ ಕಣ್ಣೀರು ಹಾಕಿದ್ದಾರೆ.
ಇಂದು ನನ್ನ ಸ್ನೇಹಿತ ನನ್ನನ್ನು ಅಗಲಿ ಹೋಗಿದ್ದಾರೆ. ಇದು ರಾಜಕಾರಣದ ಕೊಲೆ. ಇಂತಹ ಘಟನೆ ಸಹಿಸುವುದಕ್ಕೆ ಆಗೋದಿಲ್ಲ. ಧರ್ಮೇಗೌಡ ನನ್ನ ಒಡಹುಟ್ಟಿದ ಸಹೋದರನಂತೆ ಇದ್ದರು.
ಧರ್ಮೇಗೌಡ ತಂದೆ ಲಕ್ಷ್ಮಯ್ಯ ಒಂದು ಮಾತು ನನಗೆ ಹೇಳಿದ್ದರು.. ನಾನಂತೂ ಮಂತ್ರಿ ಆಗಲಿಲ್ಲ. ನಾನು ಬದುಕಿರುವಾಗಲೇ ನನ್ನ ಪುತ್ರ (ಧರ್ಮೇಗೌಡ) ಮಂತ್ರಿ ಆಗಬೇಕೆಂದಿದ್ದರು. ಆದರೆ ಅವರ ಆಸೆ ಈಡೇರಿಸಲು ಆಗಲಿಲ್ಲ ಎಂದು ಭಾವುಕರಾದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









