Dr Veerendra Heggade | ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ವೀರೇಂದ್ರ ಹೆಗ್ಗಡೆ
ದೆಹಲಿ: ರಾಜ್ಯಸಭಾ ಸದಸ್ಯರಾಗಿ ಕೇಂದ್ರ ಸರಕಾರದಿಂದ ನಾಮನಿರ್ದೇಶನಗೊಂಡಿರುವ ಡಾ.ಡಿ ವೀರೇಂದ್ರ ಹೆಗ್ಗಡೆ ಇಂದು ಬೆಳಗ್ಗೆ 11 ಗಂಟೆಗೆ ರಾಜ್ಯಸಭೆಯಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದರು.
ವೀರೇಂದ್ರ ಹೆಗ್ಗಡೆ ಅವರು ಕನ್ನಡದಲ್ಲಿಯೇ ಪ್ರಮಾಣ ವಚನ ಸ್ವೀಕಾರ ಮಾಡಿದ್ರು. ವೀರೇಂದ್ರ ಹೆಗ್ಗಡೆ ಎಂಬ ಹೆಸರಿನ ನಾನು, ರಾಜ್ಯಸಭೆಯ ಸದಸ್ಯನಾಗಿ ನಾಮನಿರ್ದೇಶನ ಹೊಂದಿದವನಾಗಿ ಕಾನೂನಿನ ಮೂಲಕ ಸ್ಥಾಪಿತವಾದ ಭಾರತದ ಸಂವಿಧಾನದ ವಿಷಯದಲ್ಲಿ ನಿಜವಾದ ಶ್ರದ್ಧೆ ಮತ್ತು ನಿಷ್ಠೆಯನ್ನು ಹೊಂದಿರುತ್ತೇನೆಂದು, ಭಾರತದ ಸಾರ್ವಭೌಮತೆ ಮತ್ತು ಅಖಂಡತೆಯನ್ನು ಎತ್ತಿ ಹಿಡಿಯುತ್ತೇನೆಂದು ಮತ್ತು ನಾನು ಕೈಕೊಳ್ಳಲಿರುವ ಕಾರ್ಯಕ್ರಮಗಳನ್ನು ಶ್ರದ್ಧಾಪೂರ್ವಕವಾಗಿ ನಿರ್ವಹಿಸುತ್ತೇನೆ ಎಂದು ದೇವರ ಹೆಸರಲ್ಲಿ ಪ್ರಮಾಣ ಮಾಡುತ್ತೇನೆ ಎಂದು ಡಾ ವೀರೇಂದ್ರ ಹೆಗ್ಗಡೆ ಅವರು ಪ್ರಮಾಣ ಸ್ವೀಕರಿಸಿದರು.
ಜುಲೈ ಆರರಂದು ಡಾ.ಡಿ.ವೀರೇಂದ್ರ ಹೆಗ್ಗಡೆ, ಸಂಗೀತ ನಿರ್ದೇಶಕ ಇಳಯರಾಜ, ಅಥ್ಲೀಟ್ ಪಿ.ಟಿ.ಉಷಾ ಹಾಗೂ ಚಲನಚಿತ್ರ ಕಥೆಗಾರ ವಿ.ವಿಜಯೇಂದ್ರ ಪ್ರಸಾದ್ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿತ್ತು.