ಧರ್ಮಸ್ಥಳ ಪ್ರಕರಣದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ಹೊರಬಿದ್ದಿದೆ.
SIT ವಶದಲ್ಲಿರುವ ಮಾಸ್ಕ್ ಮ್ಯಾನ್ ಚೆನ್ನಯ್ಯ ವಿಚಾರಣೆಯಲ್ಲಿ ಸ್ಫೋಟಕ ಹೇಳಿಕೆ ನೀಡಿದ್ದಾನೆ.
ನನ್ನನ್ನು ಬಳಸಿಕೊಂಡು ಧರ್ಮಸ್ಥಳದ ವಿರುದ್ಧ ಕಳಂಕ ತರುವ ಹುನ್ನಾರ ನಡೆದಿದೆ ಎಂದು ಶಾಕಿಂಗ್ ಹೇಳಿಕೆ ನೀಡಿದ್ದಾನೆ.
ಕೆಲವರು ಧರ್ಮಸ್ಥಳಕ್ಕೆ ಕೆಟ್ಟ ಹೆಸರು ತರಲು ಗ್ಯಾಂಗ್ ರೂಪಿಸಿ ಷಡ್ಯಂತ್ರ ನಡೆಸಿದ್ದಾರೆ ಎಂಬ ಮಾಹಿತಿ ನೀಡಿದ್ದು, SIT ಎದುರು ಗ್ಯಾಂಗ್ನವರ ಹೆಸರುಗಳನ್ನು ಸಹ ಬಹಿರಂಗಪಡಿಸಿದ್ದಾನೆ ಎನ್ನಲಾಗಿದೆ.
ಈ ಹೇಳಿಕೆಯು ಪ್ರಕರಣದ ಗಂಭೀರತೆಯನ್ನು ಹೆಚ್ಚಿಸಿದ್ದು, ಮುಂದಿನ ತನಿಖೆ ಯಾವ ದಿಕ್ಕು ತಾಳುತ್ತದೆ ಎನ್ನುವುದು ಕುತೂಹಲ ಹುಟ್ಟಿಸಿದೆ.








