ಧರ್ಮಸ್ಥಳದಲ್ಲಿ ನಡೆದಿದೆ ಎಂಬ ಹೇಳಲಾಗುತ್ತಿರುವ ಅಪರಾಧ ಪ್ರಕರಣಗಳು ಈಗ ರಾಜ್ಯ ರಾಜಕೀಯ ಮತ್ತು ಸಾಮಾಜಿಕ ವಲಯದಲ್ಲಿ ಬೃಹತ್ ಚರ್ಚೆಗೆ ಕಾರಣವಾಗಿವೆ. ಈ ಹಿನ್ನೆಲೆ ಸರ್ಕಾರವು SIT (Special Investigation Team) ರಚಿಸಿದ್ದು, ಇದರ ಬಗ್ಗೆಯೂ ಚರ್ಚೆ ನಡೆಯುತ್ತಿದೆ.
ಈ ಕುರಿತಂತೆ ಕಾಂಗ್ರೆಸ್ ಸಂಸದ DK ಸುರೇಶ್ ಪ್ರತಿಕ್ರಿಯಿಸಿದ್ದಾರೆ.
ಧರ್ಮಸ್ಥಳ ಶ್ರೀಕ್ಷೇತ್ರಕ್ಕೆ ರಾಜ್ಯದ ನೂರಾರು ಜನರು ಭಕ್ತಿಯಿಂದ ನಂಬಿಕೆ ಇಟ್ಟು ಪೂಜೆ ಸಲ್ಲಿಸುತ್ತಿದ್ದಾರೆ.
ಈ ಕ್ಷೇತ್ರದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹಲವು ವಿಚಾರಗಳು ಚರ್ಚೆಯಾಗುತ್ತಿವೆ. ಜನರಿಗೆ ಕುತೂಹಲವೂ ಇದೆ, ಅನುಮಾನಗಳೂ ಇದೆ. ಅದಕ್ಕೆ ಉತ್ತರ ಕೊಡುವುದು ಸರ್ಕಾರದ ಕರ್ತವ್ಯ, ಎಂದು ಡಿಕೆ ಸುರೇಶ್ ಹೇಳಿದ್ದಾರೆ.
ತನಿಖೆಯಿಂದ ಸತ್ಯ ಬಯಲಾಗುತ್ತದೆ. ಇದು ಶ್ರೀಕ್ಷೇತ್ರಕ್ಕೂ ಒಳ್ಳೆಯದು. ಯಾವುದೇ ರಹಸ್ಯವಿದ್ದರೆ ಅದು ಬಹಿರಂಗವಾಗಬೇಕು. ಜನರ ವಿಶ್ವಾಸ ಉಳಿಸಿಕೊಳ್ಳುವುದು ಮುಖ್ಯ, ಎಂದು ಅವರು ಹೇಳಿದರು.








