ವಿಶ್ವ ಪ್ರಸಿದ್ಧ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರನ ಸಾನಿಧ್ಯದಲ್ಲಿ ಲಕ್ಷ ದೀಪೋತ್ಸವದ ಸಂಭ್ರಮ ಮನೆ ಮಾಡಿದೆ. 8 ಶತಮಾನಗಳ ಭವ್ಯ ಇತಿಹಾಸ, ಪರಂಪರೆ ಹೊಂದಿರುವ ನಾಡಿನ ಪವಿತ್ರ ಕ್ಷೇತ್ರದಲ್ಲಿ ಕಾರ್ತಿಕ ಮಾಸ ಅಂದರೆ ಉತ್ಸವಗಳ ಪರ್ವಕಾಲ ಎಂದೇ ಜನಜನಿತ, ಲಕ್ಷದೀಪೋತ್ಸವವು ಭಕ್ತಿ ಭಾವೈಕ್ಯದ ಸಮ್ಮಿಲನ. ನಾಡಿನೆಲ್ಲೆಡೆಯಿಂದ ಬರುವ ಭಕ್ತಾದಿಗಳಿಗೆ ಧರ್ಮ, ಕಲೆ, ಸಾಹಿತ್ಯ, ಸಂಸ್ಕೃತಿ, ಮನೋರಂಜನೆಯ ಸೊಗಡನ್ನು ಆಸ್ವಾದಿಸಿ, ಆನಂದಿಸುವ ಸಮಯ. ನ.25 ರಿಂದ ಪ್ರಾರಂಭವಾಗಿರುವ ದೀಪೋತ್ಸವವು ಲಕ್ಷಾಂತರ ಜನ ಕಣ್ಮನ ಸೆಳೆಯುತ್ತಾ ಆಕರ್ಷಣೆಯ ಕೇಂದ್ರಬಿಂದುವಾಗಿದೆ.
ನಮಗೆ ಯುದ್ಧ ಬೇಡ ಶಾಂತಿ ಬೇಕು, ಆದರೆ ಇದು ನಮ್ಮ ಬಲಹೀನತೆಯಲ್ಲ: ಸ್ವಾತಂತ್ರ್ಯ ದಿನದಂದು ಭಾರತಕ್ಕೆ ಪಾಕ್ ಪ್ರಧಾನಿ ಶೆಹಬಾಜ್ ಶರೀಫ್ ಎಚ್ಚರಿಕೆ
ಇಸ್ಲಾಮಾಬಾದ್: ನಮಗೆ ಯುದ್ಧ ಬೇಕಾಗಿಲ್ಲ, ನಾವು ಶಾಂತಿಯನ್ನು ಮಾತ್ರ ಬಯಸುತ್ತೇವೆ. ಆದರೆ, ಶಾಂತಿಗಾಗಿ ನಾವು ಕೈಜೋಡಿಸುತ್ತಿರುವುದನ್ನು ಯಾರೂ ನಮ್ಮ ಬಲಹೀನತೆ ಎಂದು ಭಾವಿಸಬಾರದು ಎಂದು ಪಾಕಿಸ್ತಾನದ ಪ್ರಧಾನಿ...








