Dharwad | ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ
ಧಾರವಾಡ : ಸಾಲದ ಬಾಧೆ ತಾಳಲಾರದೆ ಯುವ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದ ನವಲಗುಂದ ತಾಲೂಕಿನ ನಾಗನೂರು ಗ್ರಾಮದಲ್ಲಿ ನಡೆದಿದೆ.
26 ವರ್ಷದ ಶಿವಪ್ರಕಾಶ್ ಹಿರೇಮಠ ಮೃತ ದುರ್ದೈವಿಗಳಾಗಿದ್ದಾರೆ.
ಈತ ಜಮೀನಲ್ಲಿ ಬೆಳೆ ಬೆಳೆಯಲು 3.50 ಲಕ್ಷ ರುಪಾಯಿ ಸಾಲ ಪಡೆದುಕೊಂಡಿದ್ದರು.
ಆದ್ರೆ ಇದೀಗ ಅತಿವೃಷ್ಠಿಗೆ ಬೆಳೆ ಸಂಪೂರ್ಣವಾಗಿ ಹಾನಿಯಾಗಿದೆ.
ಈ ಹಿನ್ನೆಲೆಯಲ್ಲಿ ಸಾಲ ತೀರಿಸಲಾಗದೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಈ ಸಂಬಂಧ ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.