Dharwad – ಯುವಕನ ಮತಾಂತರ | ಪ್ರಮೋದ್ ಮುತಾಲಿಕ್ ಆಕ್ರೋಶ
ಧಾರವಾಡ : ಮಂಡ್ಯ ಮೂಲದ ಯುವಕನ ಮತಾಂತರ ಪ್ರಕರಣವನ್ನು ಶ್ರೀ ರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಖಂಡಿಸಿದ್ದಾರೆ.
ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಮೋದ್ ಮುತಾಲಿಕ್, ಈ ಘಟನೆಯನ್ನು ಶ್ರೀರಾಮ ಸೇನೆ ಖಂಡಿಸುತ್ತದೆ. ಹುಡುಗಿಯನ್ನು ಭೇಟಿಯಾಗಲು ಬಂದಿದ್ದನೋ ಏನೋ, ಗೊತ್ತಿಲ್ಲ.
ಆತನಿಗೆ ಬಲವಂತದ ಖತ್ನಾ ಮಾಡಲಾಗಿದೆ. ಪಿಸ್ತೂಲು ನೀಡಿ ಫೋಟೋ ತೆಗೆದಿದ್ದಾರೆ. 35 ಸಾವಿರ ಹಣವನ್ನು ಖಾತೆಗೆ ಹಾಕಿದ್ದಾರೆ.

ಆತನೇ ಇದೀಗ ದೂರು ನೀಡಿದ್ದಾನೆ. ಸರಕಾರ ಮತಾಂತರ ನಿಷೇಧ ಕಾಯ್ದೆ ಜಾರಿ ಮಾಡಿದೆ.
ಸರಕಾರ ಇದನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು. ಮತಾಂತರ ಕಾಯ್ದೆ ಅಡಿ ಕೇಸು ದಾಖಲಾಗಬೇಕು ಎಂದು ಒತ್ತಾಯಿಸಿದ್ದಾರೆ.
ಇದರ ಹಿಂದೆ 11 ಜನರಷ್ಟೆ ಅಲ್ಲ, ಮಸೀದಿ, ಮದರಸಾಗಳು ಕೆಲಸ ಮಾಡುತ್ತಿವೆ. ಈ ಬಗ್ಗೆ ಸರಿಯಾಗಿ ತನಿಖೆ ಮಾಡಬೇಕು. ಅಂದಾಗ ಮಾತ್ರ ಇಂಥ ಪ್ರಕರಣಗಳು ಹೊರಗೆ ಬರುತ್ತವೆ.
ಈ ಬಗ್ಗೆ ನಾನು ಗೃಹ ಸಚಿವರಿಗೆ ಪತ್ರ ಬರೆಯುತ್ತೇನೆ. ಪತ್ರ ಬರೆದು ಮಾಹಿತಿ ತಿಳಿಸುತ್ತೇನೆ.
ಯಾವ ಯಾವ ಮಸೀದಿಗಳಲ್ಲಿ ಮತಾಂತರ ನಡೆಯುತ್ತಿವೆ ಅನ್ನೋ ಮಾಹಿತಿ ಕೊಡುತ್ತೇನೆ ಎಂದು ಹೇಳಿದ್ದಾರೆ.








