ಧಾರವಾಡದಲ್ಲಿ ಮುಂದುವರೆದ ವರ್ಷಧಾರೆ : ಬೆಳಗಳು ಸಂಪೂರ್ಣ ಜಲಾವೃತ dharwad
ಹುಬ್ಬಳ್ಳಿ : ಜಿಲ್ಲೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಬಿಟ್ಟು ಬಿಡದೇ ಮಳೆಯಾಗುತ್ತಿದ್ದು, ಜಿಲ್ಲೆಯಲ್ಲಿರುವ ಬಹುತೇಕ ಕೆರೆಗಳು ಭರ್ತಿಯಾಗಿವೆ.
ನಿರಂತರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಮಳೆಯಿಂದ ನಾನಾ ಅವಾಂತರಗಳು ಸೃಷ್ಠಿಯಾಗಿವೆ.
ಧಾರಕಾರ ಮಳೆಯಿಂದ ಕಲಘಟಗಿ ತಾಲೂಕಿನ ಹಟಕಿನಾಳದ ಜಿಗಳಿ ಕೆರೆ ಒಡೆದು ಅವಾಂತರ ಸೃಷ್ಟಿಯಾಗಿದೆ.
ಕೆರೆ ಭರ್ತಿಯಾಗಿ ಕಟ್ಟೆ ಒಡೆದ ಪರಿಣಾಮ ಅಪಾರ ಪ್ರಮಾಣದ ನೀರು ಕರೆಯಿಂದ ರೈತರ ಜಮೀನುಗಳಿಗೆ ನುಗ್ಗಿ ನೂರಾರು ಎಕರೆಯಲ್ಲಿ ಬೆಳೆದ ಬೆಳಗಳು ಸಂಪೂರ್ಣ ಜಲಾವೃತಗೊಂಡಿವೆ.
ಕೆರೆಯ ಸುತ್ತಮುತ್ತಲಿನ ನೂರಾರು ಎಕರೆ ಪ್ರದೇಶದಲ್ಲಿ ಬೆಳೆದ ಭತ್ತ, ಸೋಯಾಬಿನ್, ಕಬ್ಬು, ಹತ್ತಿ, ಗೋವಿನಜೋಳ ಬೆಳೆಗಳು ನೀರಿನಲ್ಲಿ ಜಲಾವೃತವಾಗಿರುವುದರಿಂದ ರೈತರು ಕಂಗಾಲಾಗಿದ್ದಾರೆ.