Dharwad – ಶಾಸಕರ ಹೆಸರಿನಲ್ಲಿ ಡೆತ್ ನೋಟ್ ಬರೆದಿಟ್ಟು ಮಹಿಳೆ ಆತ್ಮಹತ್ಯಗೆ ಯತ್ನ
ಧಾರವಾಡ : ಶಾಸಕ ಅರವಿಂದ ಬೆಲ್ಲದ್ ಹೆಸರಲ್ಲಿ ಡೆತ್ ನೋಟ್ ಬರೆದು ಮಹಿಳೆ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯಗೆ ಯತ್ನಿಸಿದ್ದಾರೆ.
ಶಕುಂತಲಾ ಮನಸೂರ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಶಕುಂತಲಾ ಅವರು ಕಳೆದ 20 ವರ್ಷಗಳಿಂದ ಕರ್ನಾಟಕ ಮಹರ್ಷಿ ವಾಲ್ಮಿಕ ಪಂಗಡದಲ್ಲಿ ಕಿರಿಯ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದರು.

ಈ ನಡುವೆ ಈಕೆಯ ಮೇಲೆ ಲಂಚದ ಆರೋಪ ಮಾಡಿ ಕೆಲಸದಿಂದ ತೆಗೆದು ಹಾಕಲಾಗಿತ್ತು.
ಹೀಗಾಗಿ ಧಾರವಾಡ ಶಾಸಕ ಅರವಿಂದ ಬೆಲ್ಲದ್ ಬಳಿ ಮನವಿ ಕೊಡಲು ಹೋಗಿದ್ದು, ಈ ವೇಳೆ ಶಾಸಕರು ನನಗೆ ಅಪಮಾನ ಮಾಡಿದ್ದಾರೆ.
ಶಾಸಕರೇ ನನ್ನನ್ನು ಕೆಲಸದಿಂದ ತೆಗೆಸಿದ್ದಾರೆ ಎಂದು ಆರೋಪ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.