ಧಾರವಾಡ, ಸೆ.26: ವಿವಿಧ ಇಲಾಖೆಗಳಲ್ಲಿ ಮತ್ತು ಪೊಲೀಸ್ ಇಲಾಖೆಯಲ್ಲಿ (Police Department) ಪಿಸಿ, ಪಿಎಸ್‌ಐ ಇತ್ಯಾದಿ ಸೇರಿದಂತೆ ಹಲವು ಹುದ್ದೆಗಳಿಗೆ ವಯೋಮಿತಿ ಹೆಚ್ಚಿಸಿ ನೇಮಕಾತಿ ಆರಂಭಿಸುವಂತೆ ಆಗ್ರಹಿಸಿ ಆಲ್ ಕರ್ನಾಟಕ ಸ್ಟೇಟ್ ಸ್ಪೂಡೆಂಟ್ ಅಸೋಸಿಯೇಶನ್ ವತಿಯಿಂದ ಧಾರವಾಡ (Dharwad) ಬೃಹತ್ ಪ್ರತಿಭಟನೆ ನಡೆಸಲಾಯಿತು.
ಶ್ರೀನಗರ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಪ್ರಾರಂಭಿಸಿದ ಸುಮಾರು 5 ಸಾವಿರಕ್ಕೂ ಅಧಿಕ ಅಭ್ಯರ್ಥಿಗಳು ಸಪ್ತಾಪುರ, ಕಾಲೇಜು ರಸ್ತೆ ಮಾರ್ಗವಾಗಿ ಆಲೂರು ವೆಂಕಟರಾವ್ ವೃತ್ತಕ್ಕೆ ಬಂದು ಸರಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ದಾರಿಯುದ್ದಕ್ಕೂ ಗೃಹ ಸಚಿವ ಡಾ. ಜಿ. ಪರಮೇಶ್ವರ, ಶಿಕ್ಷಣ ಸಚಿವ ಮಧು ಬಂಗಾರಪ್ಪ ಸೇರಿದಂತೆ ವಿವಿಧ ಸಚಿವರ ಭಾವಚಿತ್ರಗಳಿಗೆ ಚಪ್ಪಲಿ ಹಾಕಿ ಖಂಡಿಸಿದರು.
ಹಲವು ವರ್ಷಗಳೇ ಕಳೆದರೂ ಇಲ್ಲಿಯವರೆಗೆ ಯಾವುದೇ ನೇಮಕಾತಿ ಇಲ್ಲದೇ ಲಕ್ಷಾಂತರ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಶಿಕ್ಷಣ ಇಲಾಖೆಯಲ್ಲಿ ನೇಮಕಾತಿ ಆಗದೇ ಶಿಕ್ಷಕರ ಕೊರತೆ ಎದ್ದು ಕಾಣುತ್ತಿದೆ. ಏಳು ಎಂಟು ವರ್ಷಗಳಿಂದ ಎಫ್‌ಡಿಎ, ಎಸ್‌ಡಿಎ, ಪಶು ವೈದ್ಯರು, ಲ್ಯಾಂಡ್ ಸರ್ವೇ ಸೇರಿದಂತೆ ಬಹುತೇಕ ಇಲಾಖೆಗಳಲ್ಲಿ ಸುಮಾರು 3 ಲಕ್ಷ ಹುದ್ದೆಗಳು ಖಾಲಿ ಇದ್ದರೂ ನೇಮಕಾತಿ ಮಾಡಿಲ್ಲ ಎಂದು ಕಿಡಿಕಾರಿದರು.
ಇದನ್ನೂ ಓದಿ: ಮುಕುಳೆಪ್ಪನ ವಿರುದ್ಧ ಪ್ರಮೋದ್ ಮುತಾಲಿಕರ ತೀಕ್ಷ್ಣ ಎಚ್ಚರಿಕೆ
ಯತ್ನಾಳ್ ಬೆಂಬಲ
ಆಲ್ ಕರ್ನಾಟಕ ಸ್ಟೇಟ್ ಸ್ಪೂಡೆಂಟ್ ಅಸೋಸಿಯೇಶನ್ ಹೋರಾಟಕ್ಕೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬೆಂಬಲ ಸೂಚಿಸಿ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದಾರೆ. “ಯುವಜನತೆಯ ನ್ಯಾಯಯುತವಾದ ಬೇಡಿಕೆಗಳಿಗೆ ನನ್ನ ಬೇಷರತ್ ಬೆಂಬಲ “ ಎಂದು ಟ್ವೀಟ್ ಮಾಡಿದ್ದಾರೆ.
ಯುವಜನತೆಯ ನ್ಯಾಯಯುತವಾದ ಬೇಡಿಕೆಗಳಿಗೆ ನನ್ನ ಬೇಷರತ್ ಬೆಂಬಲ
ಅಧಿಸೂಚನೆ ಪ್ರಕಟ ಮಾಡದೆ, ಫಲಿತಾಂಶಗಳನ್ನು ವಿಳಂಬಗೊಳಿಸುತ್ತ, ಕರ್ನಾಟಕ ಲೋಕ ಸೇವಾ ಆಯೋಗ ಎಂಬ ಭ್ರಷ್ಟ ಸಂಸ್ಥೆಯಿಂದ ಸ್ಪರ್ಧಾತ್ಮಕ ಪರೀಕ್ಷೆಯ ಅಭ್ಯರ್ಥಿಗಳಿಗೆ ಆಗುತ್ತಿರುವ ನಿನ್ನೆ ಧಾರವಾಡದಲ್ಲಿ ನಿನ್ನೆ ಯುವ ಸಮೂಹ ಸಿಡಿದೆದ್ದಿದೆ. ನ್ಯಾಯುತವಾದ ಯಾವುದೇ ಬೇಡಿಕೆಗೆ ನನ್ನ… pic.twitter.com/opCm05jhfo
— Basanagouda R Patil (Yatnal) (@BasanagoudaBJP) September 26, 2025
“ಅಧಿಸೂಚನೆ ಪ್ರಕಟ ಮಾಡದೆ, ಫಲಿತಾಂಶಗಳನ್ನು ವಿಳಂಬಗೊಳಿಸುತ್ತ, ಕರ್ನಾಟಕ ಲೋಕ ಸೇವಾ ಆಯೋಗ ಎಂಬ ಭ್ರಷ್ಟ ಸಂಸ್ಥೆಯಿಂದ ಸ್ಪರ್ಧಾತ್ಮಕ ಪರೀಕ್ಷೆಯ ಅಭ್ಯರ್ಥಿಗಳಿಗೆ ಆಗುತ್ತಿರುವ ನಿನ್ನೆ ಧಾರವಾಡದಲ್ಲಿ ನಿನ್ನೆ ಯುವ ಸಮೂಹ ಸಿಡಿದೆದ್ದಿದೆ. ನ್ಯಾಯುತವಾದ ಯಾವುದೇ ಬೇಡಿಕೆಗೆ ನನ್ನ ಬೇಷರತ್ ಬೆಂಬಲವಿರುತ್ತದೆ. ಪರೀಕ್ಷಾರ್ಥಿಗಳು ಕೇಳುತ್ತಿರುವ ನ್ಯಾಯಯುತವಾದ ಬೇಡಿಕೆಗಳನ್ನು ಸರ್ಕಾರ ಕೂಡಲೇ ಪರಿಗಣಿಸಬೇಕು. ಸರ್ಕಾರ ಮತ್ತೊಮ್ಮೆ ತನ್ನ ಉಡಾಫೆ ಧೋರಣೆ ತೋರಿಸಿದರೆ ಯುವ ಸಮೂಹದೊಂದಿಗೆ ಧರಣಿ ಕೂರುತ್ತೇನೆ” ಎಂದು ಎಚ್ಚರಿಕೆ ನೀಡಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ








