DHFWS Yadgiri Recruitment 2025 : ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿಯಲ್ಲಿ ಯಾದಗಿರಿ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆ : ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರು, ಮಕ್ಕಳ ತಜ್ಞ ವೈದ್ಯರು, ಅರಿವಳಿಕೆ ತಜ್ಞರು, ಕಿವಿ ಮೂಗು ಗಂಟಲು ತಜ್ಞರು, ಫಿಜಿಷಿಯನ್, ಎಂ.ಬಿ.ಬಿ.ಎಸ್. ವೈದ್ಯರು, ಡೆಂಟಲ್ ಹೈಜೆನಿಸ್ಟ್, ಡೆಂಟಲ್ ಟೆಕ್ನಿಷಿಯನ್, ಆಪ್ಟೋಮೆಟ್ರಿಸ್ಟ್, ಆಡಿಯೊಮೆಟ್ರಿಕ ಸಹಾಯಕರು, ಶ್ರವಣದೋಷವುಳ್ಳ ಮಕ್ಕಳ ಬೋದಕರು, ನೇತ್ರ ಸಹಾಯಕ, ಬ್ಲಾಕ್ ಎಪಿಡೆಮಿಯೊಲಾಜಿಸ್ಟ್, ಲ್ಯಾಬ್ ಟೆಕ್ನಿಷಿಯನ್.
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಯಾದಗಿರಿ ಜಿಲ್ಲೆ, ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 26 ಹುದ್ದೆಗಳು
ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಆಯಾ ಹುದ್ದೆಗಳಿಗೆ ಅನುಗುಣವಾಗಿ ಎಂ.ಬಿ.ಬಿ.ಎಸ್, ಡಿಪ್ಲೊಮಾ ಇನ್ ಡೆಂಟಲ್ ಹೈಜೆನಿಷ್ಟ್, ಡಿಪ್ಲೊಮಾ ಇನ್ ಡೆಂಟಲ್ ಟೆಕ್ನಿಷಿಯನ್, ಡಿಪ್ಲೊಮಾ ಇನ್ ಹಿಯರಿಂಗ್ ಲ್ಯಾಂಗ್ವೇಜ್, ಡಿಪ್ಲೊಮಾ ಇನ್ ಆಪ್ಟೋಮೆಟ್ರಿ, ಬಿ.ಎಸ್ಸಿ, ಡಿಪ್ಲೊಮಾ ಇನ್ ಮೆಡಿಕಲ್ ಲ್ಯಾಬ್ ಟೆಕ್ನಿಷಿಯನ್ ಪದವಿ ವಿದ್ಯಾರ್ಹತೆ ಹೊಂದಿರಬೇಕು. (ಆಯಾ ಹುದ್ದೆಗಳ ವಿದ್ಯಾರ್ಹತೆಯ ಸಂಪೂರ್ಣ ಮಾಹಿತಿ ಅಧಿಸೂಚನೆಯಲ್ಲಿ ವಿವರವಾಗಿ ನೀಡಲಾಗಿದೆ)
ಆಯ್ಕೆ ವಿಧಾನ : ಮೆರಿಟ್ ಕಂ ರೋಸ್ಟರ್ ಅನ್ವಯ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜುಲೈ 11, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜುಲೈ 19, 2025
Website:https://yadgir.nic.in/en/notice_category/recruitment/








