ಮಾಧ್ಯಮಗಳ ವಿರುದ್ಧ ತಿರುಗಿಬಿದ್ದ ಶಿಲ್ಪಾ ಶೆಟ್ಟಿ – ಮಾನನಷ್ಟ ಮೊಕದ್ದಮೆ ದಾಖಲಿಸಿದ ನಟಿ
ಮುಂಬೈ : ಅಶ್ಲೀಲ ವಿಡಿಯೋ ನಿರ್ಮಾನ ಪ್ರಕರಣದಲ್ಲಿ ಬಾಲಿವುಡ್ ನ ಖ್ಯಾತ ನಟಿ ಶಿಲ್ಪಾ ಶೆಟ್ಟಿ ಜೈಲು ಸೇರಿದ್ದಾರೆ.. ಆದ್ರೆ ರಾಷ್ಟ್ರೀಯ ಮಾಧ್ಯಮಗಳಲ್ಲಿ ಶಿಲ್ಪಾ ಶೆಟ್ಟಿ ಅವರ ಹೆಸರನ್ನ ಪದೇ ಪದೇ ಪ್ರಸ್ತಾಪಿಸುತ್ತಾ ಇರೋದಕ್ಕೆ ಶಿಲ್ಪಾ ಶೆಟ್ಟಿ ತಿರುಗಿಬಿದ್ದಿದ್ದಾರೆ. ಪ್ರಕರಣ ಆರಂಭದಿಂದಲೂ ಶಿಲ್ಪಾ ಶೆಟ್ಟಿ ಹಾಗೂ ತಂಗಿ ಶಮಿತಾ ಕೂಡ ಕುಂದ್ರಾ ಜೊತೆಗೆ ಟ್ರೋಲ್ ಆಗ್ತಾ ಇದ್ದಾರೆ.. ಇದೀಗ 29 ಮಾಧ್ಯಮ ಸಿಬ್ಬಂದಿ ಮತ್ತು ಮಾಧ್ಯಮ ಸಂಸ್ಥೆಗಳ ವಿರುದ್ಧ ಶಿಲ್ಪಾ ಶೆಟ್ಟಿ ಬಾಂಬೆ ಹೈಕೋರ್ಟ್ನಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.
ಹೌದು.. ಪತಿ ರಾಜ್ ಕುಂದ್ರಾ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಕುರಿತು ಸುಳ್ಳು ಮತ್ತು ಚಾರಿತ್ರ್ಯ ಹರಣ ಮಾಡುವಂತಹ ಸುದ್ದಿಗಳನ್ನು ಪ್ರಸಾರ ಮಾಡಲಾಗಿದೆ ಎಂದು ಶಿಲ್ಪಾ ಶೆಟ್ಟಿ ಆರೋಪಿಸಿದ್ದಾರೆ. ಕುಂದ್ರಾ ಅವರನ್ನು ಜುಲೈ 19ರ ರಾತ್ರಿ ಮುಂಬೈನ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದರು. ಭಾರತೀಯ ದಂಡ ಸಂಹಿತೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಗೆ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಈ ಪ್ರಕರಣದಲ್ಲಿ ಕುಂದ್ರಾ ಪ್ರಮುಖ ಆರೋಪಿಯಾಗಿದ್ದಾರೆ ಎಂದು ಮುಂಬೈ ಅಪರಾಧ ವಿಭಾಗದ ಪೊಲೀಸರು ಮಾಹಿತಿ ನೀಡಿದ್ದಾರೆ.
ಅಶ್ಲೀಲ ಚಿತ್ರ ತಯಾರಿಕೆ ಪ್ರಕರಣದಲ್ಲಿ ಶಿಲ್ಪಾ ಶೆಟ್ಟಿಯವರ ಪಾತ್ರ ಕಂಡುಬಂದಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಆದ್ರೂ ಶಿಲ್ಪಾಗೆ ಈಗ್ಲೇ ಕ್ಲೀನ್ ಚಿಟ್ ಕೊಡೋದಕ್ಕೆ ಸಾಧ್ಯವಿಲ್ಲಾ ಎಂದಿದ್ದಾರೆ. ಈ ನಡುವೆ ಮಾಧ್ಯಮಗಳಲ್ಲಿ ಪದೇ ಪದೇ ತಮ್ಮ ಹೆಸರನ್ನ ಪ್ರಸ್ತಾಪಿಸುತ್ತಾ ಪ್ರಕರಣದ ಜೊತೆಗೆ ಜೋಡಿಸುತ್ತಿರುವ ಹಿನ್ನೆಲೆ ಶಿಲ್ಪಾ ಆಕ್ರೋಶಗೊಂಡಿದ್ದು, ಮುಂಬೈ ಹೈಕೋರ್ಟ್ ನಲ್ಲಿ ಮಾಧ್ಯಮಗಳ ವಿರುದ್ಧ ಮಾನನಷ್ಟ ಕೇಸ್ ದಾಖಲಿಸಿದ್ದಾರೆ.