ನಾಳೆಯಿಂದ ಐಪಿಎಲ್ ಆರಂಭವಾಗಲಿದ್ದು, ಈ ಲೀಗ್ ನ ಅತ್ಯಂತ ಯಶಸ್ವಿ ತಂ ಚೆನ್ನೈ ಸೂಪರ್ ಕಿಂಗ್ಸ್ ತನ್ನ ನಾಯಕನನ್ನು ಬದಾಲವಣೆ ಮಾಡಿಕೊಂಡಿದೆ.
ಚೆನ್ನೈ ಸೂಪರ್ ಕಿಂಗ್ಸ್ಗೂ ಮೊದಲು ಮುಂಬೈ ಇಂಡಿಯನ್ಸ್ , ಗುಜರಾತ್ ಟೈಟಾನ್ಸ್, ಸನ್‌ರೈಸರ್ಸ್ ಹೈದರಾಬಾದ್, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ಕೂಡ ನಾಯಕರನ್ನು ಬದಲಾಯಿಸಿದೆ.
ಹಾರ್ದಿಕ್ ಪಾಂಡ್ಯರನ್ನು ಟ್ರೇಡಿಂಗ್ ಮೂಲಕ ತಂಡಕ್ಕೆ ಸೇರಿಸಿಕೊಂಡ ಮುಂಬೈ, ರೋಹಿತ್ ಶರ್ಮಾ ಬದಲಿಗೆ ಹಾರ್ದಿಕ್ ಪಾಂಡ್ಯಗೆ ನಾಯಕತ್ವ ನೀಡಿದೆ. ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್ ತಂಡಕ್ಕೆ ಸೇರಿಕೊಂಡ ನಂತರ ಗುಜರಾತ್ ಟೈಟಾನ್ಸ್ ಫ್ರಾಂಚೈಸ್ ತನ್ನ ತಂಡದ ನಾಯಕತ್ವವನ್ನು ಯುವ ಆರಂಭಿಕ ಆಟಗಾರ ಶುಭ್ಮನ್ ಗಿಲ್ ಗೆ ನೀಡಿದೆ.
ಹರಾಜಿನಲ್ಲಿ ಬರೋಬ್ಬರಿ 20.50 ಕೋಟಿ ನೀಡಿ ಖರೀದಿಸಿದ್ದ ಆಸ್ಟ್ರೇಲಿಯಾದ ವಿಶ್ವಕಪ್ ವಿಜೇತ ನಾಯಕ ಪ್ಯಾಟ್ ಕಮಿನ್ಸ್ ಸನ್ ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ತನ್ನ ತಂಡದ ನೂತನ ನಾಯಕನಾರಾಗಿದ್ದಾರೆ. ರಸ್ತೆ ಅಪಘಾತಕ್ಕೀಡಾಗಿ ಕ್ರಿಕೆಟ್ನಿಂದ ದೂರ ಉಳಿದಿದ್ದ ರಿಷಬ್ ಪಂತ್ ಸದ್ಯ ಚೇತರಿಸಿಕೊಂಡು ಮತ್ತೆ ಮೈದಾನಕ್ಕೆ ಇಳಿದಿದ್ದಾರೆ. ಪಂತ್ ಅನುಪಸ್ಥಿತಿಯಲ್ಲಿ ಕಳೆದ ಆವೃತ್ತಿಯಲ್ಲಿ ಡೇವಿಡ್ ವಾರ್ನರ್ ನಾಯಕರಾಗಿದ್ದರು. ಸದ್ಯ ಪಂತ್ ನಾಯಕತ್ವ ವಹಿಸಿಕೊಂಡಿದ್ದಾರೆ.
ಗಾಯದ ಹಿನ್ನೆಲೆಯಲ್ಲಿ ಶ್ರೇಯಸ್ ಅಯ್ಯರ್ ಕಳೆದ ಐಪಿಎಲ್ ಆಡಿರಲಿಲ್ಲ. ನಿತೀಶ್ ರಾಣಾ ಕೆಕೆಆರ್ ತಂಡವನ್ನು ಮುನ್ನಡೆಸಿದ್ದರು. ರಾಣಾ ನಾಯಕತ್ವದಲ್ಲಿ ತಂಡದ ಪ್ರದರ್ಶನವು ಸರಾಸರಿಯಾಗಿತ್ತು. ಈಗ ಮತ್ತೆ ಶ್ರೇಯಸ್ ಅಯ್ಯರ್ ನಾಯಕತ್ವ ನೀಡಲಾಗಿದೆ.