ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂ.ಎಸ್. ಧೋನಿ MS Dhoni) ತಮ್ಮ ‘ಧೋನಿ ಎಂಟರ್ಟೇನ್ಮೆಂಟ್’ ಮೂಲಕ ಸಿನಿಮಾ ನಿರ್ಮಾಣಕ್ಕೆ ಕೈ ಹಾಕಿದ್ದಾರೆ.
ಸದ್ಯ ಅವರು ನಿರ್ಮಿಸುತ್ತಿರುವ ಮೊದಲ ಸಿನಿಮಾ ತಮಿಳು ಭಾಷೆಯದ್ದು ಎನ್ನಲಾಗಿದೆ. ಈ ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ (Lets Get Married) ಎಂದು ಶೀರ್ಷಿಕೆ ಇಡಲಾಗಿದೆ. ಈ ಚಿತ್ರದ ಟೀಸರ್ ರಿಲೀಸ್ ಆಗಿದ್ದು ಸಖತ್ ಫನ್ನಿಯಾಗಿದೆ ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ.
ಎಂ.ಎಸ್. ಧೋನಿ ಮೊದಲಿನಿಂದಲೂ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಹೀಗಾಗಿ, ತಮಿಳುನಾಡಿನಲ್ಲಿ ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಈ ಕಾರಣಕ್ಕೆ ಮೊದಲ ಚಿತ್ರವನ್ನು ತಮಿಳಿನಲ್ಲಿ ನಿರ್ಮಾಣ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ.
ಲೆಟ್ಸ್ ಗೆಟ್ ಮ್ಯಾರೀಡ್’ ಸಿನಿಮಾದ ಟೀಸರ್ ಗಮನ ಸೆಳೆದಿದೆ. ಈ ಟೀಸರ್ ಫ್ಯಾಮಿಲಿ ಎಂಟರ್ಟೇನರ್ ರೀತಿಯಲ್ಲಿ ಮೂಡಿಬರಲಿದೆ ಎಂಬುದಕ್ಕೆ ಟೀಸರ್ ಸಾಕ್ಷ್ಯ ಒದಗಿಸಿದೆ. ಸಿನಿಮಾ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾತುರ ಪಡುತ್ತಿದ್ದಾರೆ. ಈ ಚಿತ್ರವನ್ನು ರಮೇಶ್ ತಮಿಳ್ಮಣಿ ನಿರ್ದೇಶಿಸಿದ್ದಾರೆ. ಸಾಕ್ಷಿ ಸಿಂಗ್ ಧೋನಿ ಅವರು ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.