Dhruva Narayan : ಮಾಜಿ ಸಂಸದ ಧ್ರುವ ನಾರಾಯಣ್ ನಿಧನ
ಮಾಜಿ ಸಂಸದ ಧ್ರುವನಾರಾಯಣ್ ಹೃದಯಾಘಾತದಿಂದ ನಿಧನರಾಗಿದ್ದಾರೆ..
ಮೈಸೂರಿನಲ್ಲಿ ಬೆಳಗಿನ ಜಾವ ಸುಮಾರು 6 ಗಂಟೆಗೆ ಹೃದಯಘಾತ ಸಂಭವಿಸಿದೆ ಎನ್ನಲಾಗಿದೆ..
ಹೃದಯಗತವಾಗಿ ಆಸ್ಪತ್ರೆಗೆ ಕರೆದು ಹೋಗುವ ಮಾರ್ಗ ಮಧ್ಯದಲ್ಲಿ ಕೊನೆಯುಸಿರೆಳೆದಿದ್ದಾರೆ.
ರಾಜ್ಯ ಕಾಂಗ್ರೆಸ್ ಪಕ್ಷದ ಕಾರ್ಯಧ್ಯಕ್ಷರಾಗಿದ್ದ ಧ್ರುವನಾರಾಯಣ ಅವರ ನಿಧನಕ್ಕೆ ಅನೇಕ ರಾಜಕೀಯ ಮುಖಂಡರು ಸಂತಾಪ ಸೂಚಿಸುತ್ತಿದ್ದಾರೆ..
1961 ಜುಲೈ 31ರಂದು ಚಾಮರಾಜನಗರದ ಹಗ್ಗವಾಡಿಯಲ್ಲಿ ಜನಿಸಿದ್ದ ಇವರು ಬೆಂಗಳೂರಿನ ಜಿಕೆವಿಕೆಯಲ್ಲಿ ಪದವಿ ಪಡೆದಿದ್ದರು. ಕಳೆದ 2 ವರ್ಷದಿಂದ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದರು.
ಈ ಬಾರಿ ನಂಜನಗೂಡಿನಿಂದ ವಿಧಾನಸಭೆ ಚುನಾವಣೆ ಸ್ಪರ್ಧೆ ಮಾಡಲು ಸಿದ್ಧತೆ ಮಾಡಿಕೊಂಡಿದ್ದರು. 2 ಬಾರಿ ಶಾಸಕ ಒಂದು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು.
1983 ರಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದ ಧ್ರುವನಾರಾಯಣ್ 1984 ರಲ್ಲಿ ಜಿಕೆವಿಕೆಯ ಎನ್ ಎಸ್ ಯುಐ ಅಧ್ಯಕ್ಷನಾಗಿ ಆಯ್ಕೆಯಾದರು.
ನಂತರ 1986 ರಲ್ಲಿ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿದ್ದರು, ಆದರೆ 1999ರಲ್ಲಿ ಮೊದಲ ಬಾರಿಗೆ ಸಂತೆಮಾರಳ್ಳಿ ಕ್ಷೇತ್ರದಿಂದ ವಿಧಾನಸಭೆಗೆ ಮೊದಲ ಬಾರಿ ಸ್ಪರ್ಧಿಸಿ ಸೋಲನ್ನನುಭವಿಸಿದ್ದರು.
ಆದರೆ 2004 ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ 1 ಮತದ ಅಂತರದ ಗೆಲುವು ಸಾಧಿಸಿದ್ದರು.
2008ರಲ್ಲಿ ಕೊಳ್ಳೆಗಾಲ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಅದಾದ ಬಳಿಕ 2009 ಹಾಗೂ 2014 ರ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು. 2019ರ ಲೋಕಸಭಾ ಚುನಾವಣೆಯಲ್ಲಿ ಸೋಲನ್ನನುಭವಿಸಿದ್ದರು.
Dhruva Narayan : Former MP Dhruva Narayan passed away