ಇಡೀ ವಿಶ್ವವ್ಯಾಪಿ ಹರಡಿರುವ ಕೊರೊನಾ ಹೆಮ್ಮಾರಿಗೆ ಜನಪ್ರತಿನಿಧಿಗಳೂ ಹಾಗೂ ಸಿನಿ ತಾರೆಯರು ಹೊರತಾಗಿಲ್ಲ. ಸುಮಲತಾ , ಬಿಗ್ ಬಿ ಅಮಿತಾಬ್ ಬಚ್ಚನ್ , ಅಭಿಷೇಕ್ ಬಚ್ಚನ್ ಐಶ್ವರ್ಯ ಹೀಗೆ ದೊಡ್ಡ ದೊಡ್ಡ ನಟರಿಗೂ ಕೊರೊನಾ ಪಾಸಿಟಿವ್ ಇರುವುದು ದೃಢವಾಗಿದೆ. ಇದರ ಬೆನ್ನಲ್ಲೇ ಇದೀಗ ಸ್ಯಾಂಡಲ್ ವುಡ್ ಆಕ್ಷನ್ ಪ್ರಿನ್ ಧ್ರುವ ಸರ್ಜಾ ಹಾಗೂ ಅವರ ಪತ್ನಿಗೂ ಕೊರೊನಾ ಪಾಸಿಟಿವ್ ಇರುವುದು ದೃಢವಾಗಿದೆ.
ಹೌದು ಈ ಬಗ್ಗೆ ಸ್ವತಃ ಧ್ರುವ ಸರ್ಜಾ ಅವರೇ ತಮ್ಮ ಟ್ವಿಟ್ಟರ್ ಮೂಲಕ ಅಧಿಕೃತವಾಗಿ ಮಾಹಿತಿ ಹಂಚಿಕೊAಡಿದ್ದಾರೆ. ನನಗೆ ಹಾಗೂ ನನ್ನ ಪತ್ನಿಗೆ ಕೊರೊನಾ ಪಾಸಿಟಿವ್ ಇದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇವೆ. ನಾವು ಆದಷ್ಟು ಬೇಗನೇ ಗುಣಮುಖರಾಗುತ್ತೇವೆ. ನನ್ನ ಜೊತೆಗೆ ಪ್ರಾಥಮಿಕವಾಗಿ ಸಂರ‍್ಕ ಹೊಂದಿದ್ದ ಎಲ್ಲರೂ ದಯಮಾಡಿ ವೈದ್ಯಕೀಯ ಪರೀಕ್ಷೆಗೆ ಒಳಪಡಿ ಹಾಗೂ ಸುರಕ್ಷಿತವಾಗಿರಿ ಎಂದು ಮನವಿ ಮಾಡಿಕೊಂಡಿದ್ದಾರೆ. ಇನ್ನೂ ಆಕ್ಷನ್ ಪ್ರಿನ್ಸ್ ಗೆ ಕೊರೊನಾ ಪಾಸಿಟಿವ್ ಇರುವುದು ಅವರ ಅಭಿಮಾನಿಗಳಿಗೆ ಆತಂಕ ತಂದ್ದೊಡ್ಡಿದೆ.








