ರೇಣುಕಾಸ್ವಾಮಿ ಕೊಲೆ (Renukaswamy Murder Case) ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ (Darshan) ಬಗ್ಗೆ ಹಲವರು ತಡವಾಗಿ ಮಾತನಾಡಲು ಆರಂಭಿಸಿದ್ದಾರೆ.
ಆರಂಭದಲ್ಲಿ ಪ್ರಕರಣದ ಬಗ್ಗೆ ಯಾರೊಬ್ಬರೂ ಮಾತನಾಡಿರಲಿಲ್ಲ. ಆದರೆ, ಈಗ ಹಲವು ಸೆಲೆಬ್ರಿಟಿಗಳು ಮಾತನಾಡಲು ಆರಂಭಿಸಿದ್ದಾರೆ. ಶಿವಣ್ಣ, ಸುದೀಪ್, ರಮ್ಯಾ ಸೇರಿದಂತೆ ಹಲವರು ಈಗಾಗಲೇ ಪ್ರಕರಣದ ಕುರಿತು ಮಾತನಾಡಿದ್ದಾರೆ. ಮೊದಲ ಬಾರಿಗೆ ದರ್ಶನ್ ಪ್ರಕರಣದ ಕುರಿತು ಧ್ರುವ ಸರ್ಜಾ (Dhruva Sarja) ಮಾತನಾಡಿದ್ದಾರೆ. ಕಾನೂನಿಗಿಂತ ಯಾರು ದೊಡ್ಡವರಲ್ಲ ಎಂದು ಧ್ರುವಾ ಹೇಳಿದ್ದಾರೆ.
ಪ್ರಕರಣವು ಕೋರ್ಟ್ ನಲ್ಲಿದೆ. ಕಾನೂನು ಮುಂದೆ ಯಾರೂ ದೊಡ್ಡವರಲ್ಲ. ನೋಡೋಣ ಈ ಕೇಸ್ ಮುಂದೆ ಏನಾಗುತ್ತೆ ಎಂದು ಹೇಳಿದ್ದಾರೆ.
ಧ್ರುವ ಸರ್ಜಾ ನಟನೆಯ ‘ಮಾರ್ಟಿನ್’ ಮತ್ತು ‘ಕೆಡಿ’ ಸಿನಿಮಾಗಳು ಬಿಡುಗಡೆಗೆ ಸಿದ್ಧವಾಗಿ ನಿಂತಿವೆ. ಮಾರ್ಟಿನ್ ಚಿತ್ರ ಅಕ್ಟೋಬರ್ 11ರಂದು ಬಿಡುಗಡೆಯಾಗಲು ಸಿದ್ಧವಾಗಿ ನಿಂತಿದೆ.








