ನಿರ್ದೇಶಕ ತರುಣ್ ಸುಧೀರ್ (Tharun Sudhir) ಈಗ ತಮ್ಮ ಜೀವನದ ರಿಯಲ್ ನಾಯಕಿಯನ್ನು ಆಯ್ಕೆ ಮಾಡಿಕೊಂಡಿದ್ದು ಮದುವೆಗೆ ದಿನಗಣನೆ ಆರಂಭವಾಗಿದೆ. ಕ್ರಿಯೆಟಿವ್ ಆಗಿ ನಿರ್ದೇಶನ ಮಾಡುತ್ತಿದ್ದ ತರುಣ್ ಈಗ ಅಷ್ಟೇ ಕ್ರಿಯೇಟಿವ್ ಆಗಿ ಅಭಿಮಾನಿಗಳು ಹಾಗೂ ಬಂಧುಗಳ ಮುಂದೆ ಪ್ರಜೆಂಟ್ ಮಾಡಿದ್ದಾರೆ.
ತರುಣ್ ಸುಧೀರ್ ಮತ್ತು ಸೋನಲ್ (Actress Sonal) ಇಬ್ಬರು ದಾಂಪತ್ಯ (Wedding) ಜೀವನಕ್ಕೆ ಕಾಲಿಡುತ್ತಿದ್ದಾರೆ. ಇದನ್ನು ವಿಡಿಯೋ ಮೂಲಕ ಅಭಿಮಾನಿಗಳಿಗೆ ತಿಳಿಸಿದ್ದಾರೆ. ತರುಣ್ ಮತ್ತು ಸೋನಲ್ ಇಬ್ಬರು ಸಿನಿಮಾ ಇಂಡಸ್ಟ್ರಿಯವರೇ ಆಗಿರೋದ್ರಿಂದ ತಮ್ಮ ಪ್ರಿ ವೆಡ್ಡಿಂಗ್ ವಿಡಿಯೋವನ್ನ ಥಿಯೇಟರ್‌ನಲ್ಲಿಯೇ ಶೂಟ್ ಮಾಡಿದ್ದಾರೆ.
ನವರಂಗ್ ಥಿಯೇಟರ್‌ನಲ್ಲಿ ಈ ವಿಡಿಯೋ ಶೂಟ್ ಮಾಡಿದ್ದು, ಸಿನಿಮಾ ಸೀನ್ ರೀತಿಯೇ ತರುಣ್ ಮತ್ತು ಸೋನಲ್ ವಿಡಿಯೋ ಸಿದ್ಧವಾಗಿದೆ. ಸಿನಿಮಾಟೋಗ್ರಾಫರ್ ಎ.ಜೆ ಶೆಟ್ಟಿ ಈ ವಿಡಿಯೋ ಶೂಟ್ ಮಾಡಿದ್ದಾರೆ. ಆಗಸ್ಟ್ 10, 11ರಂದು ಬೆಂಗಳೂರಿನ ಕೆಂಗೇರಿ ಬಳಿ ಇರುವ ಪೂರ್ಣಿಮಾ ಫ್ಯಾಲೆಸ್‌ನಲ್ಲಿ ವಿವಾಹ ನಡೆಯಲಿದೆ. ಹೀಗಾಗಿಯೇ ಅದಕ್ಕೂ ಮುನ್ನ ಈ ವಿಡಿಯೋ ಶೂಟ್ ಮಾಡಲಾಗಿದೆ.
ಸಿನಿಮಾ ಅಂದರೆ ಸಿಂಗಲ್ ಸ್ಕ್ರಿನ್ ಥಿಯೇಟರ್ ಅದರಲ್ಲೂ ನಿರ್ದೇಶಕ ತರುಣ್ ಚಿಕ್ಕ ವಯಸ್ಸಿನಿಂದಲೂ ನವರಂಗ್ ಥಿಯೇಟರ್‌ನಲ್ಲಿ ಸಿನಿಮಾಗಳನ್ನ ನೋಡಿಕೊಂಡು ಬಂದವರು. ಈಗ ತಮ್ಮ ನಿರ್ದೇಶನದ ಸಿನಿಮಾಗಳು ನವರಂಗ್ ಥಿಯೇಟರ್‌ನಲ್ಲಿ ಶತದಿನೋತ್ಸವ ಪೂರೈಸಿವೆ. ಹಾಗಾಗಿ ನವರಂಗ್ ಥಿಯೇಟರ್‌ನಲ್ಲೇ ತಮ್ಮ ಪ್ರಿ ವೆಡ್ಡಿಂಗ್ ಶೂಟ್ ಮಾಡಿಸಿದ್ದಾರೆ.
ಪ್ರಿ ವೆಡ್ಡಿಂಗ್ ಶೂಟ್‌ನಲ್ಲಿ ತರುಣ್ ಮತ್ತು ಸೋನಲ್ ಬ್ಲ್ಯಾಕ್ ಬಣ್ಣದ ಔಟ್ ಫಿಟ್‌ನಲ್ಲಿ ಕಾಣಿಸಿಕೊಂಡಿದ್ದು, ತರುಣ್‌ಗೆ ಡಿಸೈನರ್ ಚೇತನ್ ಕಾಸ್ಟ್ಯೂಮ್ ಡಿಸೈನ್ ಮಾಡಿದ್ದಾರೆ.








