ಚಿಕ್ಕಮಗಳೂರು: ದಾಖಲೆ ಇಲ್ಲದೇ ಸಾಗಿಸುತ್ತಿದ್ದ ನಾಲ್ಕು ಕೋಟಿ ರೂ. ಮೌಲ್ಯದ ಚಿನ್ನ, ವಜ್ರ, ಬೆಳ್ಳಿಯನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.
ಜಿಲ್ಲೆಯ ತರಿಕೆರೆ ತಾಲೂಕಿನ ಎಂ.ಸಿ. ಹಳ್ಳಿ ಚೆಕ್ ಪೋಸ್ಟ್ ಹತ್ತರಿ ವಶಕ್ಕೆ ಪಡೆಯಲಾಗಿದೆ. 6 ಕೆಜಿ 586 ಗ್ರಾಂ ಚಿನ್ನ, 1 ಕೆಜಿ 71.492 ಗ್ರಾಂ ವಜ್ರಾಭರಣ, 1 ಕೆಜಿ ಬೆಳ್ಳಿ ವಸ್ತುಗಳನ್ನು ಚೆಕ್ ಪೋಸ್ಟ್ ಸಿಬ್ಬಂದಿ ಪರಿಶೀಲನೆ ವೇಳೆ ವಶಕ್ಕೆ ಪಡೆದಿದ್ದಾರೆ.
ಕಾರಿನಲ್ಲಿ ಸಾಗಿಸಲಾಗುತ್ತಿದ್ದ ಚಿನ್ನ, ಬೆಳ್ಳಿ, ಡೈಮಂಡ್ಗಳ ದಾಖಲೆಗಳನ್ನು ಕೇಳಿದಾಗ ಸಂಬಂಧಪಟ್ಟವರು ದಾಖಲೆ ನೀಡಿಲ್ಲ. ಹೀಗಾಗಿ ಚಿನ್ನಾಭರಣಗಳನ್ನು ಪೊಲೀಸರು ಜಪ್ತಿ ಮಾಡಿ, ತನಿಖೆ ಕೈಗೊಂಡಿದ್ದಾರೆ. ಇದನ್ನು ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಸಾಗಿಸಲಾಗುತ್ತಿತ್ತು ಎಂದು ತಿಳಿದುಬಂದಿದೆ.