ಕರ್ನಾಟಕ ರಾಜಕೀಯದಲ್ಲಿ ಕಾಂಗ್ರೆಸ್ ಪಕ್ಷದೊಳಗಿನ ಇತ್ತೀಚಿನ ಹೇಳಿಕೆಗಳು ತೀವ್ರ ಚರ್ಚೆಗೆ ಕಾರಣವಾಗುತ್ತಿವೆ. ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ ಚುನಾವಣೆಗಳಲ್ಲಿ ಅಕ್ರಮ ನಡೆದಿದೆ ಎಂಬ ವಿವಾದಾತ್ಮಕ ಹೇಳಿಕೆಯಿಂದ ರಾಜ್ಯ ರಾಜಕಾರಣದಲ್ಲಿ ಹೊಸ ಚರ್ಚೆ ಶುರುವಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ BJP ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರಾಹುಲ್ ಗಾಂಧಿಯ ಈ ಹೇಳಿಕೆ ತಾವೇ ನೇಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಅಪಮಾನ ಮಾಡುವಂತಿದೆ ಎಂದು ಕಿಡಿಕಾರಿದ್ದಾರೆ.
ಈಗಾಗಲೇ ಈ ಸಂಬಂಧ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ. ಚುನಾವಣೆಗಳಲ್ಲಿ ಅಕ್ರಮ ನಡೆದಿದ್ದರೆ, ಕಾಂಗ್ರೆಸ್ ಕರ್ನಾಟಕದಲ್ಲಿ ಅಧಿಕಾರಕ್ಕೆ ಬರುತ್ತಿತ್ತಾ? ಸಿದ್ದರಾಮಯ್ಯ ಸಿಎಂ ಆಗುತ್ತಿದ್ರಾ? ಡಿಕೆಶಿ ಡಿಸಿಎಂ ಆಗ್ತಿದ್ರಾ? ಎಂದು ವಿಜಯೇಂದ್ರ ಕೇಳಿದ್ದಾರೆ.
ಇವರ ಮಾತುಗಳಿಂದ ಕಾಂಗ್ರೆಸ್ ಶಿಬಿರದಲ್ಲಿ ಪರಸ್ಪರ ಅಸಮಾಧಾನಗಳು ಮತ್ತು ನಾಯಕರ ನಡುವೆ ವಿಶ್ವಾಸದ ಕೊರತೆಯ ಶಂಕೆಗಳು ಚರ್ಚೆಗೆ ಬಂದಿದೆ.








