ಶಿವಮೊಗ್ಗ: ಎಣಿಸುವ ನೆಪದಲ್ಲಿ ಅಧಿಕಾರಿಗಳು ದೇವರ ಹುಂಡಿಗೆ ಕೈ ಹಾಕಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.
ತೀರ್ಥಹಳ್ಳಿ (Thirthahalli) ತಾಲೂಕಿನ ಹಣಗೆರೆಕಟ್ಟೆಯ ಹಜರತ್ ಸೈಯದ್ ಸಾದತ್ ದರ್ಗಾ ಮತ್ತು ಭೂತರಾಯ ಚೌಡೇಶ್ವರಿ ದೇವಸ್ಥಾನದ ಹುಂಡಿ ಎಣಿಕೆಯಲ್ಲಿ ಅಧಿಕಾರಿಗಳು ಕರಾಮತ್ತು ಮೆರೆದಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಇತ್ತೀಚೆಗಷ್ಟೇ ದೇವಸ್ಥಾನ ಹುಂಡಿ ಎಣಿಕೆ ಕಾರ್ಯ ನಡೆದಿತ್ತು. ಆದರೆ, ಸಂಶಯ ಬಂದ ಮೇಲೆ ಮತ್ತೊಮ್ಮೆ ಶುಕ್ರವಾರ ಎಣಿಸಲಾಯಿತು. ಈ ವೇಳೆ 77 ಸಾವಿರ ಹಣ ವ್ಯತ್ಯಾಸ ಕಂಡು ಬಂದಿದೆ. ಹೀಗಾಗಿ ದೇವಸ್ಥಾನದ ಆಡಳಿತ ಮಂಡಳಿ ತಹಶೀಲ್ದಾರ್ಗೆ ದೂರು ಸಲ್ಲಿಸಿದೆ. ಒಂದು ವೇಳೆ ತಪ್ಪು ನಡೆದಿದ್ದರೆ, ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.