ರಾಜ್ಯದಲ್ಲಿ ಚುನಾವಣಾ ಕಾವು ರಂಗೇರುತ್ತಿದೆ. ಈ ಹಿನ್ನೆಲೆಯಲ್ಲಿ ನಾಯಕರು ಗೆಲ್ಲಲು ಶತಾಯಗತಾಯ ತಂತ್ರ ಹೆಣೆಯುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಈ ಚುನಾವಣೆಯಲ್ಲಿ ಸಿಎಂ ಆಗುವ ಕನಸು ಕಾಣುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಟೆಂಪಲ್ ರನ್ ನಡೆಸುತ್ತಿದ್ದಾರೆ.
ಬೈಂದೂರು ಬಳಿಯ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ (Kollur Mookambika temple) ನವಚಂಡಿಕಾಯಾಗ ಪೂರ್ಣಾಹುತಿ ಪೂಜೆ ನಡೆಸಿದ್ದಾರೆ. ಮೂಕಾಂಬಿಕೆಯ ಸನ್ನಿಧಿ ದೇವಾಲಯದ ಪ್ರಾಂಗಣದಲ್ಲಿ ಶಿವಕುಮಾರ್ ಕೈಯಲ್ಲಿ ರುದ್ರಾಕ್ಷಿ ಮಣಿಹಾರ ಹಿಡಿದು ಧ್ಯಾಮಮಗ್ನರಾಗಿದ್ದಾರೆ. ಈ ಸಂದರ್ಭದಲ್ಲಿ ಕುಟುಂಬ ಸದಸ್ಯರು ಭಾಗಿಯಾಗಿದ್ದರು.
ರಾಜ್ಯ ವಿಧಾನಸಭಾ ಚುನಾವಣೆ (assembly elections) ಮತದಾನಕ್ಕೆ ಕೇವಲ ಎರಡು ವಾರ ಮಾತ್ರ ಬಾಕಿಯಿದೆ. ಹೀಗಾಗಿ ಕಾಂಗ್ರೆಸ್ ಪಕ್ಷ ಬಹುಮತ ಗಳಿಸಿ, ತಾವು ಸಿಎಂ ಆಗಬೇಕು ಎಂದು ದೇವರ ಮೊರೆ ಹೋಗುತ್ತಿದ್ದಾರೆ. ಬೇರೆ ಸಮಯಕ್ಕಿಂತ ಚುನಾವಣಾ ಸಂದರ್ಭಗಳಲ್ಲಿ ನಮ್ಮ ರಾಜಕಾರಣಿಗಳು ದೇವದೇವತೆಗಳೆಡೆ ಹೆಚ್ಚು ಶ್ರದ್ಧೆ ಭಕ್ತಿಯನ್ನು ಪ್ರದರ್ಶಿಸುತ್ತಾರೆ.