ಬೆಂಗಳೂರು: ಕಾಂಗ್ರೆಸ್ ನಲ್ಲಿ ಡಿನ್ನರ್ ಪಾಲಿಟಿಕ್ಸ್ ಜೋರಾಗಿದೆ. ಈ ಮಧ್ಯೆ ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಅವರು ದೇವರ ಮೊರೆ ಹೋಗಿದ್ದಾರೆ.
ತಮಿಳುನಾಡಿನ (Tamil Nadu) ಕುಂಬಕೋಣಂಗೆ ಭೇಟಿ ನೀಡಿದ್ದ ಡಿಕೆಶಿ, ಪ್ರತ್ಯಂಗಿರಾ ದೇವಿ (Pratyangira Devi) ದರ್ಶನ ಮಾಡಿದ್ದಾರೆ. ಈ ವೇಳೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಬ್ರಹ್ಮಾಂಡ ರಕ್ಷಿಸುವುದಕ್ಕಾಗಿ ʻಪ್ರತ್ಯಂಗಿರಾ ದೇವಿʼ ಅವತಾರ ಎತ್ತಿದ್ದಾರೆ. ಪ್ರತ್ಯಂಗಿರಾ ದೇವಿಯು ಶಕ್ತಿ ದೇವತೆಗಳಲ್ಲಿ ಉಗ್ರ ಸ್ವರೂಪಿಣಿ, ಶತ್ರು ಸಂಹಾರಕ್ಕಾಗಿ ಜನಿಸಿ ಬಂದವಳು. ರಕ್ಷಣೆಗಾಗಿ ಪ್ರತಿಯೊಬ್ಬರು ದೇವಿಯ ದರ್ಶನ ಪಡೆಯುತ್ತಾರೆ. ಈಗ ಡಿಕೆಶಿ ದರ್ಶನ ಪಡೆದಿರುವುದಕ್ಕೆ ಕೂಡ ಹಲವಾರು ಅನುಮಾನಗಳು ವ್ಯಕ್ತವಾಗುತ್ತಿವೆ. ಹಲವರು ಹಲವು ರೀತಿಯಲ್ಲಿ ವ್ಯಾಖ್ಯಾನಿಸುತ್ತಿದ್ದಾರೆ.
ಗೃಹ ಸಚಿವ ಪರಮೇಶ್ವರ್ ಆಯೋಜಿಸಿದ್ದ ಡಿನ್ನರ್ ಸಭೆಗೆ ಬ್ರೇಕ್ ಹಾಕಿದ ನಂತರ ಕಾಂಗ್ರೆಸ್ ಭಿನ್ನಮತ ತಾರಕಕ್ಕೆ ಏರಿದೆ. ಡಿನ್ನರ್ ಪಾಲಿಟಿಕ್ಸ್ ಮಾಡಿದ್ದ ಸಿಎಂ ಬಣಕ್ಕೆ, ವಿದೇಶದಿಂದ ಮರಳಿ ಬರುತ್ತಿದ್ದಂತೆ ತಾಳ್ಮೆಯಿಂದಲೇ ಉತ್ತರ ನೀಡಿದ್ದಾರೆ
ಸಿಇಟಿ ಪರೀಕ್ಷಾ ವೇಳಾಪಟ್ಟಿ ಪ್ರಕಟ!
ಬೆಂಗಳೂರು: ಸಿಇಟಿ ಪರೀಕ್ಷಾ ವೇಳಾಪಟ್ಟಿ(CET Exam) ಪ್ರಕಟವಾಗಿದ್ದು, ಏ. 16 ಮತ್ತು 17ಕ್ಕೆ ಸಿಇಟಿ ಪರೀಕ್ಷೆ ನಡೆಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಅಧಿಕೃತವಾಗಿ ಘೋಷಿಸಿದೆ....