ಸುಶಾಂತ್ ಅಭಿನಯದ ಕೊನೆಯ ಚಿತ್ರ ದಿಲ್ ಬೇಚಾರಾ ಜುಲೈ.24 ರಂದು ಡಿಸ್ನಿ ಹಾಟ್ ಸ್ಟಾರ್ ನಲ್ಲಿ ರಿಲೀಸ್ ಆಗಿದ್ದು, ಪ್ರೇಕ್ಷಕರಿಂದ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ. ಸುಶಾಂತ್ ಸಾವಿನ ಬಳಿಕ ಅವರ ಕೊನೆಯ ಚಿತ್ರ ಅತ್ಯಂತ ಮಹತ್ವ ಪಡೆದುಕೊಂಡಿದ್ದು, ಈಗಾಗಲೇ ಅನೇಕ ದಾಖಲೆಗಳನ್ನು ಬರೆದಿದೆ. ಇದೀಗ ಈ ಚಿತ್ರ ಮತ್ತೊಂದು ದಾಖಲೆ ಬರೆದಿದೆ. ಇಲ್ಲಿಯವರೆಗೂ ಹಾಟ್ ಸ್ಟಾರ್ ನಲ್ಲಿ ಚಿತ್ರವನ್ನು ಅಂದಾಜು 8 ಕೋಟಿಗೂ ಹೆಚ್ಚು ಮಂದಿ ವೀಕ್ಷಣೆ ಮಾಡಿದ್ದಾರೆ. ಚಿತ್ರ ಬಿಡುಗಡೆಯಾದ ಕೇವಲ 18 ಗಂಟೆಗಳ ಒಳಗೆ 7.50 ಕೋಟಿ ವೀವ್ಸ್ ಪಡೆದುಕೊಂಡಿದೆ. ಇನ್ನೂ ಸುಶಾಂತ್ ಗೌರವಾರ್ಥ ಹಾಟ್‍ಸ್ಟಾರ್ ನಲ್ಲಿ ಉಚಿತವಾಗಿ ದಿಲ್ ಬೇಚಾರಾ ಚಿತ್ರ ವೀಕ್ಷಣೆಗೆ ಅನುವು ಮಾಡಿಕೊಡಲಾಗಿತ್ತು. ಇದರಿಂದಾಗಿ ಸಬ್ ಸ್ಕ್ರೈಬ್ ಮಾಡಿಕೊಳ್ಳದೇ ಇರುವವರು ಸಹ ಚಿತ್ರ ವೀಕ್ಷಣೆ ಮಾಡುವ ಅವಕಾಶವಿದೆ. ಇನ್ನೂ ಚಿತ್ರಕ್ಕೆ ಉತ್ತಮ ರೆಸ್ಪಾನ್ಸ್ ಸಿಕ್ಕಿದ್ದು, ಐಎಂಡಿಬಿನಲ್ಲಿ 10ಕ್ಕೆ 10 ರೇಟಿಂಗ್ಸ್ ಸಿಕ್ಕಿದೆ.
ಅಟ್ಟಿಕಾ ಗೋಲ್ಡ್ ಸಾಮ್ರಾಜ್ಯಕ್ಕೆ ಇಡಿ ಶಾಕ್: 4 ರಾಜ್ಯಗಳ 19 ಕಡೆ ಮಹಾ ದಾಳಿ, ಮಾಲೀಕ ಬಾಬು ಪರಾರಿ
ಹಳೆಯ ಚಿನ್ನ ಖರೀದಿ ಮತ್ತು ಅಡವಿಟ್ಟ ಚಿನ್ನ ಬಿಡಿಸಿಕೊಡುವ ಹೆಸರಿನಲ್ಲಿ ಜನಪ್ರಿಯವಾಗಿದ್ದ ಅಟ್ಟಿಕಾ ಗೋಲ್ಡ್ ಕಂಪನಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಿಗ್ ಶಾಕ್ ನೀಡಿದ್ದಾರೆ. ಅಕ್ರಮ ಹಣ...








